Breaking News
Home / ರಾಜಕೀಯ / ಮತದಾನದ ವೇಳೆ ಕಲ್ಲು ತೂರಾಟ. ಬಿಜೆಪಿ ನಾಯಕನಿಗೆ ಗಾಯ

ಮತದಾನದ ವೇಳೆ ಕಲ್ಲು ತೂರಾಟ. ಬಿಜೆಪಿ ನಾಯಕನಿಗೆ ಗಾಯ

Spread the love

ಶ್ಚಿಮ ಬಂಗಾಳ: 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಇಂದು (ಶುಕ್ರವಾರ) ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದ ವರದಿಯಾಗಿದೆ.

ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ನಡೆದ ಕೆಲ ಹೊತ್ತಿನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಚಂದಮಾರಿಯ ಮತಗಟ್ಟೆಯೊಂದರ ಬಳಿ ಕಲ್ಲು ತೂರಾಟದ ವರದಿಗಳು ಹೊರಹೊಮ್ಮಿವೆ.

ಈ ವೇಳೆ ಬಿಜೆಪಿ ಬೂತ್ ಅಧ್ಯಕ್ಷರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಂದ್ಮಾರಿ ಪ್ರದೇಶದಲ್ಲಿ ಚುನಾವಣೆ ವೇಳೆ ಹಿಂಸಾಚಾರ ಹೊಸದೇನಲ್ಲ. ಈ ಪ್ರದೇಶ ಯಾವಾಗಲೂ ಸೂಕ್ಷ್ಮಪ್ರದೇಶವಾಗಿದ್ದು ಈ ಬಾರಿಯೂ ಮತದಾನದ ದಿನವೇ ಕಲ್ಲು ತೂರಾಟ ನಡೆದಿರುವುದು ಭದ್ರತಾ ವ್ಯವಸ್ಥೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದೆ.

Stones Pelted: ಮತದಾನದ ವೇಳೆ ಕಲ್ಲು ತೂರಾಟ. ಬಿಜೆಪಿ ನಾಯಕನಿಗೆ ಗಾಯ

ಕಲ್ಲು ತೂರಾಟ ಹೇಗೆ ಆರಂಭವಾಯಿತು ಮತ್ತು ಇದರಲ್ಲಿ ಭಾಗಿಯಾದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಚುನಾವಣಾ ಆಯೋಗ ಕೂಡ ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಭದ್ರತಾ ಪಡೆಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಮತದಾನ ಶಾಂತಿಯುತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರತಿಯೊಬ್ಬ ಮತದಾರರು ಯಾವುದೇ ಭಯವಿಲ್ಲದೆ ತಮ್ಮ ಹಕ್ಕು ಚಲಾಯಿಸಲು ಅವಕಾಶ ಮಾಡಿಕೊಡುವುದಾಗಿ ಆಯೋಗ ಹೇಳಿದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ