ಬೆಂಗಳೂರು : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.
“ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ” ಎಂದು ಹೇಳಿದರು.
Laxmi News 24×7