Breaking News

ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್​

Spread the love

ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಮಧ್ಯಾಹ್ನ ಎಂಸಿಎ ವಿದ್ಯಾರ್ಥಿನಿ ನೇಹಾ ಎಂಬುವರನ್ನು ಫಯಾಜ್​ ಕೊಲೆ ಮಾಡಿದ್ದನು. ಕೊಲೆ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸರು ಆರೋಪಿ ಫಯಾಜನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ತುಮಕೂರು, ಏಪ್ರಿಲ್​ 19: ನಗರದ ಬಿವಿಬಿ ಇಂಜಿನಿಯರ್​​ ಕಾಲೇಜು (BVB Engineering College) ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ (Student Neha) ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದರು. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ  ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದರು.

 


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ