Breaking News

ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲು

Spread the love

ಬೆಂಗಳೂರು: ಚುನಾವಣೆ ಸಮೀಪದಲ್ಲೇ ಬಿಜೆಪಿಗೆ (BJP) ಚುನಾವಣಾ ಆಯೋಗ ಶಾಕ್‌ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (by vijayendra) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ.

ಏ. 17ರಂದು ಹೇಳಿಕೆ ನೀಡಿದ್ದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

LOK SABHA ELECTION: ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲು

ಈ ದೂರಿನನ್ವಯ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ , ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆ ಬಿ ವೈ ವಿಜಯೇಂದ್ರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಶಿಕಾರಿಪುರ ವಿಧಾನಸಭಾಕ್ಷೇತ್ರದ ಶಾಸಕರು ಆಗಿರುವ ವಿಜಯೇಂದ್ರ ಹಾಗೂ ಬಿಜೆಪಿ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರ ವಿರುದ್ಧ ಗಾಂಧಿನಗರದ ಚುನಾವಣಾ ನೊಡೆಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ