Breaking News

ಬಳ್ಳಾರಿ ಜಿಲ್ಲೆ ವಿಭಜನೆಯಾದ್ರೆ ಜಿಲ್ಲೆ ಬಿಜೆಪಿ ಎರಡು ಹೋಳಾಗುತ್ತದೆ. Bellary ಸಿಎಂ ಮೊಂಡುತನ ಮಾಡಿ ಜಿಲ್ಲೆ ರಚಿಸಿದ್ರೆ ನಾನೇನು ಮಾಡ್ಲಿ

Spread the love

ಬಳ್ಳಾರಿ: ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲ ಇಲ್ಲ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಖಡಕ್ಕಾಗಿ ತಿಳಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ಸಿಎಂ ತಾತ್ವಿಕ ಒಪ್ಪಿಗೆ ವಿಚಾರದ ಕುರಿತ ಪ್ರಶ್ನಿಸಿದಾಗ ಸೋಮಶೇಖರ ರೆಡ್ಡಿ ಪ್ರಬಲ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲವಿಲ್ಲ. ರಾಜ್ಯ ಸರ್ಕಾರ ಇಂತಹ ನಿರ್ಣಯ ಕೈಗೊಳ್ಳಬಾರದಿತ್ತು. ಈ ಜಿಲ್ಲೆಯ ಜನರು, ವಿಜಯನಗರ ಜಿಲ್ಲೆ ರಚನೆಯ ವಿರೋಧಿಸಿ ಹೋರಾಟ ಮಾಡಿದರೆ ಅವರೊಂದಿಗೆ ನಾನೂ ನಿಲ್ಲುವೆ ಎಂದು ಎಚ್ಚರಿಸಿದ್ದಾರೆ

ಬಳ್ಳಾರಿ ಜಿಲ್ಲೆ ವಿಭಜನೆಯಾದ್ರೆ ಜಿಲ್ಲೆಯಲ್ಲಿ ಬಿಜೆಪಿ ಎರಡು ಹೋಳಾಗುತ್ತದೆ. ಈ ಜಿಲ್ಲೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸುತ್ತಾರೆ. ವಿಜಯನಗರ ಜಿಲ್ಲೆ ಬೇಡ ಬೇಡ ಅಂತ ಎಷ್ಟು ಬಾರಿ ಸಿಎಂ ಬಿಎಸ್‍ವೈ ಅವರಿಗೆ ಹೇಳಬೇಕು. ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ತೆಗೆದುಕೊಂಡು ಹೋಗಿ ಹೇಳಿದ್ದೇವೆ. ಇನ್ನೆಷ್ಟು ಬಾರಿ ಹೇಳಬೇಕು. ಡಿವೈಡ್ ಆಗಲೇಬೇಕು ಎಂದು ಡಿಸೈಡ್ ಆದರೆ ನಾವೇನು ಮಾಡಬೇಕು. ರಾಜ್ಯ ಸರ್ಕಾರ ಮೊಂಡುತನಕ್ಕೆ ಬಿದ್ರೆ ನಾವೇನು ಮಾಡಬೇಕು. ನಾನಂತೂ ಇನ್ನೊಂದು ಬಾರಿ ಸಿಎಂಗೆ ಹೇಳಲ್ಲ. ಯಾರಾದರೂ ಈ ಬಗ್ಗೆ ಹೋರಾಟ ಮಾಡಿದರೆ ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ