Breaking News

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

Spread the love

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ಬೆಂಗಳೂರಿನ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್ ಇತ್ತೀಚೆಗೆ ಭೇಟಿ ನೀಡಿ ಉಪಹಾರ ಸೇವಿಸುತ್ತಿದ್ದರು. ಆಗ ಶಿಕ್ಷಕ ಕೆ. ರಾಮು ಊಟ ಬಡಿಸುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿತ್ತು. ಈ ಕುರಿತಾದ ದೂರು ಆಧರಿಸಿ ನೋಡಲ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಸರ್ಕಾರಿ ನೌಕರನಾಗಿ ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷ್ಯ ತೋರಿರುವುದು, ಅನುಮತಿ ಪಡೆದುಕೊಳ್ಳದೆ ಕೇಂದ್ರ ಸ್ಥಾನ ಬಿಟ್ಟ ಕರ್ತವ್ಯಲೋಪದ ಮೇಲೆ ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಅಮಾನತು ಮಾಡಿದ್ದಾರೆ


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ