ರಾಯಚೂರು: ಗುಲ್ಬರ್ಗ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್‍ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಆಯ್ಕೆ ಮಾಡಲಾಗಿದೆ.
ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಪಾಂಡಿತ್ಯ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಗುರುತಿಸಿ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 20ರಂದು ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯ ಗುರುತಿಸಿ ಗೌರವ ಡಾಕ್ಟರೇಟ್ ನೀಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಅಪಾರ ಪಾಂಡಿತ್ಯ ಹೊಂದಿರುವ ಶ್ರೀಗಳು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ್ದಾರೆ. ಅವರ ಈ ಸೇವೆ ಗುರತಿಸಿ ಆಯ್ಕೆ ಮಾಡಲಾಗಿದೆ ಅಂತ ಗುಲ್ಬರ್ಗ ವಿವಿ ಸಿಂಡಿಕೇಟ್ ಸದಸ್ಯ ಡಾ.ಶರಣಬಸವ ಪಾಟೀಲ್ ಜೋಳದಹೆಡಗಿ ತಿಳಿಸಿದ್ದಾರೆ.