Breaking News
Home / Uncategorized / ಸಚಿವ ಸಂಪುಟ ಸರ್ಜರಿ ಅಂತಿಮ ಹಂತಕ್ಕೆ ಇಂದು ದೆಹಲಿಗೆ ತೆರಳಲಿರುವ BSY:ಉಮೇಶ್ ಕತ್ತಿ ಮಂತ್ರಿ ಆಗೋದು ಖಚಿತನಾ…?

ಸಚಿವ ಸಂಪುಟ ಸರ್ಜರಿ ಅಂತಿಮ ಹಂತಕ್ಕೆ ಇಂದು ದೆಹಲಿಗೆ ತೆರಳಲಿರುವ BSY:ಉಮೇಶ್ ಕತ್ತಿ ಮಂತ್ರಿ ಆಗೋದು ಖಚಿತನಾ…?

Spread the love

ಬೆಂಗಳೂರು: ಸಂಪುಟ ಸರ್ಕಸ್ ಅಂತಿಮ ಹಂತಕ್ಕೆ ತಲುಪಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಂಪುಟ ಸರ್ಜರಿ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇಂದು ದೆಹಲಿಗೆ ತೆರಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಸಂಜೆ ವೇಳೆ ನಿರ್ಧಾರ ಪ್ರಕಟವಾಗಲಿದೆ. ಈ ನಡುವೆ ಖಾಲಿ ಇರುವ 7 ಸಚಿವ ಸ್ಥಾನಕ್ಕಾಗಿ 10ಕ್ಕೂ ಹೆಚ್ಚು ಶಾಸಕರು ಲಾಬಿ ನಡೆಸಿದ್ದಾರೆ.

ದಾವಣಗೆರೆಯ ಎಸ್.ಎ. ರವೀಂದ್ರನಾಥ್, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ, ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಬೀಳಗಿ ಶಾಸಕ ಮುರುಗೇಶ್ ನಿರಾಣಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹಿರಿಯೂರು ಶಾಸಕಿ ಪೂರ್ಣಿಮಾ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಬೇಡಿಕೆಯಿಟ್ಟಿದ್ದಾರೆ.

ಈ ಕುರಿತು ಶಾಸಕ ರೇಣುಕಾಚಾರ್ಯ, ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಬೇಡಿಕೆ ಇಟ್ಟಿಲ್ಲ. ಆದರೆ ದಾವಣಗೆರೆಗೆ ಸಚಿವ ಸ್ಥಾನ ನೀಡಬೇಕು. ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾಗಿ ಹೇಳಿದ್ದಾರೆ.

ಇನ್ನು ಶಾಸಕ ಮುರುಗೇಶ್ ನಿರಾಣಿ, ನೂರಕ್ಕೆ ನೂರರಷ್ಟು ತಮಗೆ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ, ನಿಮಗೆ ಈ ಮೊದಲೇ ಸಚಿವ ಸ್ಥಾನ ಸಿಗಬೇಕಿತ್ತು. ಸ್ವಲ್ಪ ವಿಳಂಬವಾಗಿದೆ ಎಂದಿದ್ದರು. ಹಾಗಾಗಿ ಈ ಬಾರಿ ನನಗೆ ಸಚಿವ ಸ್ಥಾನ ನೀಡುವ ಭರವಸೆಯಿದೆ ಎಂದಿದ್ದಾರೆ.

ಒಟ್ಟಾರೆ ದಿನದಿಂದ ದಿನಕ್ಕೆ ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಸಿಎಂ ಯಡಿಯೂರಪ್ಪ ಯಾವೆಲ್ಲ ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.


Spread the love

About Laxminews 24x7

Check Also

ಪಕ್ಕದಲ್ಲೇ ಕೃಷ್ಣೆ ಹರಿದರೂ ನೀರಿಗೆ ಬರ!

Spread the loveಮುಳಬಾಗಿಲು: ರಾಜ್ಯದ ಕಟ್ಟಕಡೆಯ ಹಾಗೂ ನೆರೆಯ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಮುಳಬಾಗಿಲು ತಾಲ್ಲೂಕು ಬಯಲು ಪ್ರದೇಶವಾಗಿದೆ. ಯಾವುದೇ ಶಾಶ್ವತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ