Breaking News
Home / Uncategorized / ನೇಹಾ ಹತ್ಯೆ: ಸರ್ಕಾರ ಪ್ರಕರಣವನ್ನು ತನ್ನದೇ ರೀತಿಯಲ್ಲಿ ನಿಭಾಯಿಸುತ್ತದೆ; ಡಿ.ಕೆ .ಶಿ.

ನೇಹಾ ಹತ್ಯೆ: ಸರ್ಕಾರ ಪ್ರಕರಣವನ್ನು ತನ್ನದೇ ರೀತಿಯಲ್ಲಿ ನಿಭಾಯಿಸುತ್ತದೆ; ಡಿ.ಕೆ .ಶಿ.

Spread the love

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸುವುದಕ್ಕೆ ತಮ್ಮ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ, ತಮ್ಮ ಸರ್ಕಾರ ಪ್ರಕರಣವನ್ನು ತನ್ನದೇ ಆದ ರೀತಿಯಲ್ಲಿ ನಿಭಾಯಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಕಳೆದ ವಾರ ಬಿವಿಬಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ಕೊಲ್ಲಲ್ಪಟ್ಟ ಕಾಂಗ್ರೆಸ್ ಕೌನ್ಸಿಲರ್‌ನ ಮಗಳು ನೇಹಾ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ಒತ್ತಾಯಿಸಿದ್ದು, ಪೊಲೀಸರು ಪ್ರಕರಣವನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.

ಹುಬ್ಬಳ್ಳಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದರಲ್ಲಿ ನಮಗೆ ಯಾವುದೇ ಅಭ್ಯಂತರವಿಲ್ಲ. ಅವರು ಹಸ್ತಾಂತರಿಸಲಿ, ಅವರು ಏನು ಬೇಕಾದರೂ ಮಾಡಲಿ. ಆದರೆ, ಸರ್ಕಾರ ಈ ಪ್ರಕರಣವನ್ನು ತನ್ನದೇ ಆದ ರೀತಿಯಲ್ಲಿ ನಿಭಾಯಿಸುತ್ತದೆ, ಅದರಲ್ಲಿ ಯಾವುದೇ ಪ್ರಶ್ನೆಯಿಲ್ಲ’ ಎಂದು ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಯುವತಿಯ ತಂದೆ ನಿರಂಜನ ಹಿರೇಮಠ ಘಟನೆಯನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದು, ಪ್ರಕರಣದ ಉಸ್ತುವಾರಿ ವಹಿಸಿರುವ ಪೊಲೀಸ್ ಕಮಿಷನರ್ ಅವರನ್ನು ನಿರ್ಲಕ್ಷ್ಯ ಆರೋಪದ ಮೇಲೆ ವರ್ಗಾವಣೆ ಮಾಡಬೇಕು ಎಂದಿದ್ದರು.


Spread the love

About Laxminews 24x7

Check Also

ರೇವಣ್ಣ ನಡವಳಿಕೆ ಸರಿಯಿಲ್ಲ, ಇಂಗ್ಲೆಂಡ್ ನಲ್ಲೂ ತಗಲಾಕೊಂಡಿದ್ದರು : ಮಾಜಿ ಸಂಸದ ಶಿವರಾಮೇಗೌಡ ಗಂಭೀರ ಆರೋಪ

Spread the loveಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ