Breaking News

ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ

Spread the love

ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ

ಹುಬ್ಬಳ್ಳಿ: ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈಗಾಗಲೇ ನೇಹಾ ಸಾವಿಗೆ ನ್ಯಾಯ ಬೇಕು, ನಾಡಿನ ಮಕ್ಕಳಿಗೆ ರಕ್ಷಣೆ ಬೇಕು ಅಂತ ಹೋರಾಟ ಮಾಡಲಾಗುತ್ತಿದೆ. ಈ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ನಗರದ ಕೇಶ್ವಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಅಫ್ತಾಬ್​ ಶಿರಹಟ್ಟಿ ಎಂಬ ಯುವಕನಿಂದ ಹಿಂದೂ ಯುವತಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆ ವೇಳೆ ಸ್ಥಳೀಯ ಹಿಂದೂ ಯುವಕರ ಗುಂಪೊಂದು ಆರೋಪಿ ಅಪ್ತಾಬ್​ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.ಹಣ್ಣಿನ ವ್ಯಾಪಾರಿಯಾಗಿರುವ ಅಫ್ತಾಬ್​ ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆ ಎದುರಗಡೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಯುವತಿ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧನ ಮಾಡಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಕೋರ್ಟ್‌ ಆರೋಪಿಗೆ 1 ವಾರ ನ್ಯಾಯಾಂಗ ಬಂಧನ ವಿಧಿಸಿದೆ. ಘಟನೆ ಬಗ್ಗೆ ನೊಂದು ಯುವತಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಬಳಿಕ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ