Breaking News

ಕುಡಿಯುವ ನೀರಿಗಾಗಿ ಹಲ್ಲೆ ; ಐಪಿಎಸ್ ಅಧಿಕಾರಿ ಸೇರಿ 14 ಜನರ ಮೇಲೆ ಪ್ರಕರಣ ದಾಖಲು

Spread the love

ಬೆಳಗಾವಿ : ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಸಾರ್ವಜನಿಕ ಬಾವಿಯ ಕುಡಿಯುವ ನೀರು ಬಳಕೆ ಮಾಡಿರುವ ಕುರಿತಂತೆ ಹಲ್ಲೆ, ಬೇದರಿಕೆಯ ಆರೋಪದ ಮೇಲೆ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರ ಮೇಲೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

<br>ಅಥಣಿ : ಕುಡಿಯುವ ನೀರಿಗಾಗಿ ಹಲ್ಲೆ ; ಐಪಿಎಸ್ ಅಧಿಕಾರಿ ಸೇರಿ 14 ಜನರ ಮೇಲೆ ಪ್ರಕರಣ ದಾಖಲು

ಐಗಳಿ ಗ್ರಾಮದ ಸೈದಪ್ಪಾ ಗಡಾದಿ ಕುಟುಂಬದವರು ಸಾರ್ವಜನಿಕರ ಬಾವಿಯ ನೀರನ್ನು ಬಳಕೆ ಮಾಡುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ಸೇರಿದಂತೆ 14 ಜನರು ಮಾತಿಗೆ ಮಾತು ಬೆಳೆಸಿ ಗಲಾಟೆ ನಡೆದಿದೆ.

ಅಷ್ಟಕ್ಕೆ ಸುಮ್ಮನಾಗದ ಐಪಿಎಸ್ ಗಡಾದಿ ದೂರು ದಾರರ ಕುಟುಂಬದವರ ಮೇಲೆ ಹಲ್ಲೆ ಮಾಡಿ, ಜೀವ ಬೀದರಿಕೆ ಹಾಕಿದ ಹಿನ್ನೆಲೆಯಲ್ಲಿ ನೊಂದ ಕುಟುಂಬದವರು ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ತನಿಖೆ ಆರಂಭವಾಗಿದೆ ಎಂದು ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ