ಧಾರವಾಡ: ಜಿಪಂ ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಸಿಬಿಐ ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.
ಧಾರವಾಡದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಎಂ.ಪಂಚಾಕ್ಷರಿ ಈ ಆದೇಶ ಹೊರಡಿಸಿದ್ದಾರೆ.
ಸಿಬಿಐ ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.
ಸಿಬಿಐ ಅಧಿಕಾರಿಗಳ ತಂಡ ಬುಧವಾರ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಆದರೆ ಗುರುವಾರ ಸಲ್ಲಿಸುವುದಾಗಿ ಹೇಳಿದ್ದರಿಂದ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.
ಜಾಮೀನು ಕೋರಿ ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲ ಭರತಕುಮಾರ್ ಎಂ. ಅವರು ಅರ್ಜಿ ಸಲ್ಲಿಸಿದ್ದರು.
Laxmi News 24×7