Breaking News
Home / ರಾಜಕೀಯ / ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ

Spread the love

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದ್ದು, ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ ಚಾಲನೆ ನೀಡಲಾಗಿದೆ.

ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಗಿದೆ.

ಬಳಿಕ ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಐತಿಹಾಸಿಕ ಬೆಂಗಳೂರು `ಕರಗ'ಕ್ಕೆ ಅದ್ಧೂರಿ ಚಾಲನೆ : ಹರಿದು ಬಂದ ಜನಸಾಗರ

ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ. ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ಭೇಟಿ ನೀಡಿದೆ. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಗಿದೆ.

ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್ ಪೇಟೆ ಮೂಲಕ ಬುಧವಾರ ಬೆಳಗ್ಗೆ 7 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಲಿದೆ. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗ ಉತ್ಸವಕ್ಕೆ ತೆರೆ ಬೀಳಲಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ