ಬೀದರ್ : ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದೆ. ಈಗ ಬಿಜೆಪಿ ನಾಯಕರು ಸಿಬಿಐ ತನಿಖೆಗೆ ನೀಡಬೇಕು ಅಂತ ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರಾ? ನೇಹಾ ಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನು ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಇಂದು ನೇಹಾ ಮನೆಗೆ ಭೇಟಿ ನೀಡಿ ಹತ್ಯೆ ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡಿದೆ. ನೇಹಾ ತಂದೆ ನಿರಂಜನ್ ಹಿರೇಮಠ, ಗೀತಾ ಹಿರೇಮಠ ಅವರ ಬಳಿ ಸುಮಾರು ೧ ಗಂಟೆಗಳ ಸಿಐಡಿ ಅಧಿಕಾರಿಗಳ ತಂಡ ವಿಚಾರಣೆ ನಡೆಸಿದ್ದು, ಹತ್ಯೆ ಕುರಿತು ಮಾಹಿತಿ ಪಡೆದುಕೊಂಡಿದೆ. ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನನ್ನು ಸದ್ಯ ಸಿಐಡಿ ವಶಕ್ಕೆ ಪಡೆದುಕೊಂಡಿದೆ.