Breaking News

ಮತದಾನ ಮೊದಲು ನಂತರ ಮದುವೆ: ಓಡಿ ಬಂದು ಮತ ಹಾಕಿದ ವರ-ವಧು

Spread the love

ಚಾಮರಾಜನಗರ ಏಪ್ರಿಲ್ 26: ದಾಂಪತ್ಯ ಜೀವನಕ್ಕೆ ಕಾಲಿಡುವ ಮುನ್ನ ವರನೊಬ್ಬ ಓಡಿ ಬಂದು ಮತ ಚಲಾಯಿಸಿದ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ.

ತಾಳಿ ಕಟ್ಟುವ ಶುಭ ಗಳಿಗೆಗೂ ಮುನ್ನ ವರ ಚೇತನ್ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ ಒಂಬತ್ತು ಗಂಟೆಗೆ ತಾಳಿ ಕಟ್ಟುವ ಶುಭ ಮುಹೂರ್ತವಿತ್ತು.

 

ಹೀಗಾಗಿ ಇದಕ್ಕೂ ಮುನ್ನ ಮತಗಟ್ಟೆಗೆ ಓಡೋಡಿ ಬಂದ ವರ ಚೇತನ್ ಮತ ಹಾಕಿದರು.

ಈ ವೇಳೆ ವರನ ಕುಟುಂಬಸ್ಥರು ಸಾಥ್ ನೀಡಿದರು. ಶುಭ ಮುಹೂರ್ತಕ್ಕೆ ಸಮಯ ಮೀರುವ ಕಾರಣ ವರ ಓಡೋಡಿ ಬಂದು ಮತ ಕೇಂದ್ರದಲ್ಲಿ ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮತದಾನದ ಹೆಸರೇಳಿಕೊಂಡು ಮನೆಯಲ್ಲಿ ಮತದಾನ ಮಾಡದೇ ಇರುವ ಯುವ ಪೀಳಿಗೆಗೆ ಈ ಘಟನೆ ಮಾದರಿಯಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ