ಬೆಳಗಾವಿ: ‘ರಾಹುಲ್ ಗಾಂಧಿ ಅವರೇ ಮುಂದಿನ ಪ್ರಧಾನಿ ಆಗಬೇಕು ಎಂಬ ನಿರೀಕ್ಷೆ ನಮಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಹೇಳಿದರು.
ನಗರದಲ್ಲಿ ಗುರುವಾರ ಚೊಂಬು ಹಿಡಿದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂಡಿ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರು’ ಎಂಬ ಪ್ರಶ್ನೆಗೆ ಹೀಗೆ ಪ್ರತಿಕ್ರಿಯಿಸಿದರು.

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಕನ್ನಡಿಗರಿಗೆ ಅನ್ಯಾಯ ಮಾಡಿದ ಮೋದಿ ಚುನಾವಣಾ ಪ್ರವಾಸಕ್ಕೆ ಬರುವ ಅರ್ಹತೆ ಹೊಂದಿಲ್ಲ. ಆರೂವರೆ ಕೋಟಿ ಕನ್ನಡಿಗರ ಮೇಲೆ ಸೇಡು ತೀರಿಸಿಕೊಳ್ಳುತ್ತಿರುವ ಮೋದಿ ಮತ್ತು ಅಮಿತ್ ಶಾ ಅವರನ್ನು ರಾಜ್ಯದೊಳಗೆ ಬಿಡಬಾರದು’ ಎಂದು ಹೇಳಿದರು.
Laxmi News 24×7