ಬೆಳಗಾವಿ, ಏ.25: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆಬೈಲಹೊಂಗಲ(Bailhongal) ಬಸ್ ನಿಲ್ದಾಣದಲ್ಲಿ ನಡೆದಿದೆ. ಇನ್ನು ಈ ಬಸ್ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟ್ಟಿತ್ತು. ಈ ವೇಳೆ ಓಡಿ ಬಂದು ಬಸ್ ಹತ್ತಲು ಮಹಿಳೆ ಯತ್ನಿಸಿದ್ದಾರೆ. ಆಗ ಮಹಿಳೆಗೆ ನಿರ್ವಾಹಕ ಬೈಯ್ದಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬಸ್ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ
ಇನ್ನು ಈ ವೇಳೆ ಜಗಳ ಬಿಡಿಸಲು ಬಂದ ಚಾಲಕರ ಮೇಲೆಯೂ ಹಲ್ಲೆ ಮಾಡಿದ ಯುವಕರು, ಬಸ್ ನಿಲ್ದಾಣದಲ್ಲಿದ್ದ ಕಂಟ್ರೋಲರ್ ಕೊಠಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಬಳಿಕ ರೊಚ್ಚಿಗೆದ್ದ ಚಾಲಕರು ಮತ್ತು ನಿರ್ವಾಹಕರು ಬೈಲಹೊಂಗಲ ಬಸ್ ನಿಲ್ದಾಣದಿಂದ ಹೊರಡುವ ಬಸ್ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಬೈಲಹೊಂಗಲ ಪೊಲೀಸ್ ಠಾಣೆ ಬಳಿ ಜಮಾವಣೆಯಾದ ಅವರು, ಹಲ್ಲೆ ಮಾಡಿದವರನ್ನ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
Laxmi News 24×7