Breaking News

ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

Spread the love

ಬೆಳಗಾವಿ, ಏ.25: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆಬೈಲಹೊಂಗಲ(Bailhongal) ಬಸ್ ನಿಲ್ದಾಣದಲ್ಲಿ ನಡೆದಿದೆ. ಇನ್ನು ಈ ಬಸ್​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟ್ಟಿತ್ತು. ಈ ವೇಳೆ ಓಡಿ ಬಂದು ಬಸ್ ಹತ್ತಲು ಮಹಿಳೆ ಯತ್ನಿಸಿದ್ದಾರೆ. ಆಗ ಮಹಿಳೆಗೆ ನಿರ್ವಾಹಕ ಬೈಯ್ದಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ: ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ

ಇನ್ನು ಈ ವೇಳೆ ಜಗಳ ಬಿಡಿಸಲು ಬಂದ ಚಾಲಕರ ಮೇಲೆಯೂ ಹಲ್ಲೆ ಮಾಡಿದ ಯುವಕರು, ಬಸ್ ನಿಲ್ದಾಣದಲ್ಲಿದ್ದ ಕಂಟ್ರೋಲರ್ ಕೊಠಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಬಳಿಕ ರೊಚ್ಚಿಗೆದ್ದ ಚಾಲಕರು ಮತ್ತು ನಿರ್ವಾಹಕರು ಬೈಲಹೊಂಗಲ ಬಸ್ ನಿಲ್ದಾಣದಿಂದ ಹೊರಡುವ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಬೈಲಹೊಂಗಲ ಪೊಲೀಸ್ ಠಾಣೆ ಬಳಿ ಜಮಾವಣೆಯಾದ ಅವರು, ಹಲ್ಲೆ ಮಾಡಿದವರನ್ನ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ