Breaking News
Home / Uncategorized / ಬೆಳಗಾವಿ ಮೇಲೆ ಪಿಎಂ-ಸಿಎಂ ಕಣ್ಣು, ಅಖಾಡಕ್ಕೆ ಏಕಕಾಲಕ್ಕೆ ಮೋದಿ, ಸಿದ್ದರಾಮಯ್ಯ ಎಂಟ್ರಿ

ಬೆಳಗಾವಿ ಮೇಲೆ ಪಿಎಂ-ಸಿಎಂ ಕಣ್ಣು, ಅಖಾಡಕ್ಕೆ ಏಕಕಾಲಕ್ಕೆ ಮೋದಿ, ಸಿದ್ದರಾಮಯ್ಯ ಎಂಟ್ರಿ

Spread the love

ಬೆಳಗಾವಿ, ಏಪ್ರಿಲ್​ 27: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ. ಈ ಹಿನ್ನೆಲೆಯಲ್ಲಿ ಪ್ರಚಾರ ಇನ್ನೂ ನಡೆದಿದೆ. ರಾಜಕೀಯ ಪವರ್​ ಸೆಂಟರ್ ಎನಿಸಿಕೊಂಡಿರುವ ಬೆಳಗಾವಿ (Belagavi) ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ (Narendra Modi) ಮತ್ತು ಸಿಎಂ ಸಿದ್ದರಾಮಯ್ಯ (Siddaramaiah) ಧುಮುಕಲಿದ್ದಾರೆ.

ಬೆಳಗಾವಿ ಮೇಲೆ ಪಿಎಂ-ಸಿಎಂ ಕಣ್ಣು, ಅಖಾಡಕ್ಕೆ ಏಕಕಾಲಕ್ಕೆ ಮೋದಿ, ಸಿದ್ದರಾಮಯ್ಯ ಎಂಟ್ರಿ

ಏಪ್ರಿಲ್ 28ರ ಬೆಳಿಗ್ಗೆ 11ಕ್ಕೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಇದೇ ದಿನದಂದು ಬೆಳಗಾವಿ ಮತ್ತು ಚಿಕ್ಕೋಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ಉಗಾರ್ ಖುರ್ದ್, ಬೆಳಗಾವಿ ಕ್ಷೇತ್ರದ ಯರಗಟ್ಟಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದೇ ದಿನ ಎರಡೂ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸಮಾವೇಶ ನಡೆಸಲಿದ್ದಾರೆ.

ಬೆಳಗಾವಿ ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ಬಿಜೆಪಿ ತನ್ನದೆಯಾದ ಪ್ರಭಾವ ಹೊಂದಿದೆ. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃಣಾಲ್​ ಹೆಬ್ಬಾಳ್ಕರ್​​ ಅವರನ್ನು ಕಣಕ್ಕಿಳಿಸಿ, ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅವರನ್ನು ಮಣಿಸಲು ರಣತಂತ್ರ ರೂಪಿಸಿದ್ದಾರೆ.


Spread the love

About Laxminews 24x7

Check Also

ಅಕ್ಷಯ ತೃತೀಯ 2024ರ ಪೂಜಾ ಸಮಯ ಮತ್ತು ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

Spread the loveಅಕ್ಷಯ ತೃತೀಯವನ್ನು ಹಿಂದೂ ಧರ್ಮದಲ್ಲಿ ವಿಶೇಷ ದಿನವೆಂದು ಪರಿಗಣಿಸಲಾಗಿದೆ. ಧಾರ್ಮಿಕ ದೃಷ್ಟಿಕೋನದ ಹೊರತಾಗಿ, ಅಕ್ಷಯ ತೃತೀಯ ದಿನವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ