Breaking News

ಕಾಲೇಜು ಪ್ರಾರಂಭದ ಎರಡನೇ ದಿನವೂ ನೀರಸ ಪ್ರತಿಕ್ರಿಯೆ ಸಿಕ್ಕಿದೆ.

Spread the love

ಬೆಂಗಳೂರು: ಪದವಿ ಕಾಲೇಜು ಪ್ರಾರಂಭದ ಎರಡನೇ ದಿನವೂ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಎರಡನೇ ದಿನವಾದ ಇಂದು ಕೂಡಾ ವಿದ್ಯಾರ್ಥಿಗಳು ಕಾಲೇಜಿಗೆ ಬರೋದಕ್ಕೆ ಹಿಂದೇಟು ಹಾಕಿದ್ದಾರೆ. ಮೊದಲ ದಿನಕ್ಕೆ ಹೋಲಿಸಿದ್ರೆ ಸ್ವಲ್ಪ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ.ಕೊರೊನಾ ನಡುವೆಯೂ ಎರಡನೇ ದಿನ ಕಡಿಮೆ ವಿದ್ಯಾರ್ಥಿಗಳಿಗೆ ಬಹುತೇಕ ಕಾಲೇಜುಗಳಲ್ಲಿ ತರಗತಿ ನಡೀತು. ಮಹಾರಾಣಿ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ನಿನ್ನೆಗಿಂತ ಇಂದು ಹೆಚ್ಚು ವಿದ್ಯಾರ್ಥಿನಿಯರು ಆಗಮಿಸಿದ್ದರು. ಸರ್ಕಾರದ ಮಾರ್ಗಸೂಚಿಯಂತೆ ಕಾಲೇಜಿನಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್ ವ್ಯವಸ್ಥೆ, ಸಾಮಾಜಿಕ ಅಂತರಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳು ಖುಷಿಯಿಂದಲೇ ಪಾಠ ಕೇಳಿದರು.

ಅನೇಕ ವಿದ್ಯಾರ್ಥಿಗಳು ಕೊರೋನಾ ಟೆಸ್ಟ್ ಮಾಡಿಸದೇ ಕಾಲೇಜಿಗೆ ಬಂದಿದ್ದರು. ಹೀಗಾಗಿ ಮಹಾರಾಣಿ ಕಾಲೇಜಿನಲ್ಲಿ ಬಿಬಿಎಂಪಿ ವತಿಯಿಂದ ಉಚಿತ ಆಂಟಿಜೆನ್ ಟೆಸ್ಟ್ ಹಾಗೂ ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಲಾಯಿತು. ರಾಜಾಜಿನಗರದ ವಿವೇಕಾನಂದ ಕಾಲೇಜಿನಲ್ಲಿ ನಿನ್ನೆ ಕೇವಲ 8 ರಿಂದ 10 ಜನ ಬಂದಿದ್ದರು. ಇಂದು 25 ರಿಂದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಎರಡನೇ ದಿನಕ್ಕೆ ವಿದ್ಯಾರ್ಥಿ ಸಂಖ್ಯೆಯಲ್ಲಿ ಏರಿಕೆಯಾಗಿದ್ದನ್ನು ಕಂಡು ಉಪನ್ಯಾಸಕರು ಸಂತೋಷಗೊಂಡರು.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ