Breaking News
Home / Uncategorized / ಚಾಮರಾಜನಗರದ ಈ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಮರು ಮತದಾನ

ಚಾಮರಾಜನಗರದ ಈ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಮರು ಮತದಾನ

Spread the love

ಬೆಂಗಳೂರು: ಚಾಮರಾಜನಗರ ಲೋಕಸಭಾ (Chamarajanagara Loksabha Constituency) ಕ್ಷೇತ್ರದ ಹನೂರು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಏಪ್ರಿಲ್ 29 ಸೋಮವಾರ ಮರು ಮತದಾನ ನಡೆಯಲಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಇಂಡಿಗನತ್ತ (Indiganatta Village) ಗ್ರಾಮದ ಜನರು ಮತದಾನ ಬಹಿಷ್ಕರಿಸಿದ್ದರು.

ಇಷ್ಟು ಅಲ್ಲದೇ ಮತಗಟ್ಟೆಗೆ ನುಗ್ಗಿ ಇವಿಎಂ ಧ್ವಂಸಗೊಳಿಸಿದ್ದರು. ಈ ಹಿನ್ನೆಲೆ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟನೆ ಹೊರಡಿಸಿದೆ.

Re Poll: ಚಾಮರಾಜನಗರದ ಈ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಮರು ಮತದಾನ

ಚಾಮರಾಜನಗರ: ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ ಇಂಡಿಗನತ್ತ ಗ್ರಾಮದ ಮತಗಟ್ಟೆಗೆ ನುಗ್ಗಿ ಇವಿಎಂಗೆ (EVM) ದ್ವಂಸಗೊಳಿಸಲಾಗಿತ್ತು. ಈ ವೇಳೆ ನಡೆದ ಗಲಾಟೆಯಲ್ಲಿ ಚುನಾವಣಾಧಿಕಾರಿಗಳು ಸಹ ಗಾಯಗೊಂಡಿದ್ರು.


ಸೋಮವಾರ ಮರು ಮತದಾನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಇಂಡಿಗನತ್ತ, ತೇಕಣೆ, ಮೆಂದಾರೆ ತುಳಸಿಕೆರೆ ಹಾಗೂ ಪಡಸಲನತ್ತ ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಾರಣ ಗ್ರಾಮಸ್ಥರು ಮತದಾನದಿಂದ ದೂರ ಉಳಿದುಕೊಂಡಿದ್ದಾರೆ. ನಮಗೆ ರಸ್ತೆ, ಕುಡಿಯುವ ನೀರು, ಆಸ್ಪತ್ರೆ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲ. ಹಾಗಾಗಿ ನಾವೇಕೆ ವೋಟ್ ಮಾಡಬೇಕು ಎಂದು ಐದು ಗ್ರಾಮದ ಜನರು ಮತಗಟ್ಟೆ ಬರದೇ ಆಕ್ರೋಶ ಹೊರಹಾಕಿದ್ದರು.


Spread the love

About Laxminews 24x7

Check Also

ಹುಬ್ಬಳ್ಳಿ: ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌ಗೆ ಶ್ರೀನಯಾ ಸೇರ್ಪಡೆ

Spread the love ಹುಬ್ಬಳ್ಳಿ: ಇಲ್ಲಿನ ಬಾಲಕಿ ಶ್ರೀನಯಾ ಹೊಂಗಲ ಸಾಧನೆ ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌ನಲ್ಲಿ ಸೇರ್ಪಡೆಯಾಗಿದೆ. 4 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ