Breaking News

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಅತ್ತ ವಿದೇಶಕ್ಕೆ ಹೋದರಾ ಸಂಸದ?

Spread the love

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (special investigation team) ರಚನೆಯಾಗಲಿದೆ. ರಾಜ್ಯ ಸರ್ಕಾರದಿಂದ (state government) ಇದೀಗ ಆದೇಶ ಹೊರಬಿದ್ದಿದೆ.ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ (SIT) ತನಿಖೆ ನಡೆಸುವಂತೆ ಮಹಿಳಾ ಆಯೋಗದ (Women’s Commission) ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿದೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಟ್ವೀಟ್ ಮಾಡಿ, ಮಾಹಿತಿ ನೀಡಿದ್ದಾರೆ.

 

ಪ್ರಜ್ವಲ್ ರೇವಣ್ಣ ವಿಡಿಯೋ ತನಿಖೆ ಹೊಣೆ ವಿಶೇಷ ತಂಡಕ್ಕೆ

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಜೌಧರಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ. ಜಿ. ಪರಮೇಶ್ವರ್‌ಗೆ ಪತ್ರ ಬರೆದಿದ್ದರು. ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಇದರ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದೆ.

 

 

 

ಟ್ವೀಟ್ ಮೂಲಕ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. “ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ” ಅಂತ ಸಿಎಂ ಟ್ವೀಟ್ ಮಾಡಿದ್ದಾರೆ.

ವಿದೇಶಕ್ಕೆ ಹೋದರಾ ಪ್ರಜ್ವಲ್ ರೇವಣ್ಣ?

ಇನ್ನು ಒಂದೆಡೆ ವಿಡಿಯೋ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತಂಡ ರಚಿಸುತ್ತಿದ್ದಂತೆ, ಅತ್ತ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎನ್ನಲಾಗಿಜೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನದಿಂದ ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಹೋಗಿದ್ದಾರೆ ಎನ್ನಲಾಗಿದೆ. ಆದರೆ ಅವರು ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ವಿದೇಶಕ್ಕೆ ಹೋದರಾ? ಅಥವಾ ತನಿಖೆಗೆ ವಿಶೇಷ ತಂಡ ರಚನೆ ಆಗುತ್ತಿದೆ ಅಂತ ತಿಳಿದು ಹೋದರಾ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಎಚ್‌ಡಿಕೆಯವರನ್ನು ಪ್ರಶ್ನಿಸಿದ್ದ ಕಾಂಗ್ರೆಸ್!

ಇನ್ನು ಕಳೆದ ಏಪ್ರಿಲ್ 25ರಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿಯವರನ್ನು ಪ್ರಶ್ನೆ ಮಾಡಿತ್ತು. ಕುಮಾರಸ್ವಾಮಿಯವರೇ, ನೀವು ತೋರಿಸಿ, ತೋರಿಸಿ ಜೇಬೊಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ? ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ? ಅಂತ ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿತ್ತು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ