Breaking News

‘ಬರ ಪರಿಹಾರ ನೀಡದೇ ಕಾಂಗ್ರೆಸ್ ದಿವಾಳಿ’

Spread the love

ಹುಬ್ಬಳ್ಳಿ: ‘ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಯಾವತ್ತು ಹೇಳಿಲ್ಲ. ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಆಡಳಿತ ಸಹಿಸದ ಕಾಂಗ್ರೆಸ್‌ನವರು ರಾಜಕೀಯ ದುರುದ್ದೇಶದಿಂದ ‘ಇಂಡಿಯಾ’ ಒಕ್ಕೂಟದ ಜೊತೆ ಸೇರಿ ನ್ಯಾಯಾಲಯಕ್ಕೆ ಹೋಗಿದ್ದಾರೆ’ ಎಂದು ಕೇಂದ್ರ ಸಚಿವ, ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಶನಿವಾರ ಆರೋಪಿಸಿದರು.

ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ರಾಜ್ಯ ವಿಪತ್ತು ಸ್ಪಂದನಾ ನಿಧಿಯಲ್ಲಿ ಪರಿವರ್ತನೆ ಮಾಡಿ, ಮುಂಚಿತವಾಗಿ ಹಣ ನೀಡುತ್ತಿದೆ’ ಎಂದು ಸುದ್ದಿಗಾರರ ಜೊತೆಗೆ ಮಾತನಾಡಿ ಸಮರ್ಥಿಸಿಕೊಂಡರು.

‘ಪ್ರಸ್ತುತ ವರ್ಷ ರೈತರಿಗೆ ಬರ ಪರಿಹಾರವಾಗಿ ರಾಜ್ಯ ಸರ್ಕಾರ ₹900 ಕೋಟಿ ವಿತರಿಸಬೇಕಿತ್ತು. ಆದರೆ, ರೈತರ ಖಾತೆಗೆ ಕೇವಲ ₹2 ಸಾವಿರ ಜಮಾ ಮಾಡಿದೆ’ ಎಂದು ಅವರು ಆರೋಪಿಸಿದರು.

‘ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವಿದ್ದಾಗ ಬರ ಪರಿಹಾರ ನೀಡಲಾಗಿತ್ತು. ಈಗ ಏಕೆ ನೀಡಿಲ್ಲ? ಕಾಂಗ್ರೆಸ್ ದಿವಾಳಿ ಆಗಿರುವುದಕ್ಕೆ ಇದೇ ಸಾಕ್ಷಿ ಎಂದು ಜನ ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ