Breaking News

ಪ್ರತೀ ಬಾರಿ ರಾಜ್ಯಕ್ಕೆ ಬರೋದು ಹೊಸ ಹೊಸ ಸುಳ್ಳು ಹೇಳಿ ಹೋಗೋದು.ಮೋದಿ ವಿರುದ್ಧ ಸಿಎಂ ವಾಗ್ದಾಳಿ

Spread the love

ಚಿಕ್ಕೋಡಿ : ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

 

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ಲ ಎಂದು ಮೋದಿ ಅವರ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮುಂದುವರೆಸಿದರು.

ಕಿತ್ತೂರು ರಾಣಿ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು: ಬೊಮ್ಮಾಯಿ ಮಾಡ್ಲಿಲ್ಲ, ಯಡಿಯೂರಪ್ಪ ಮಾಡ್ಲಿಲ್ಲ. ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ. ಆದರೆ ಈ ಮೋದಿ ಅದೇನು ಸುಳ್ಳು ಹೇಳ್ತಾರೆ ನೋಡಿ‌. ಕಾಂಗ್ರೆಸ್ ನವರು ರಾಣಿ ಚನ್ನಮ್ಮರಿಗೆ ಮತ್ತು ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದೀವಿ ಎಂದು ಸುಳ್ಳು ಹೇಳ್ತೀರಲ್ಲಾ , ಸುಳ್ಳಿಗೆ ಒಂದು ಮಿತಿಯಾದರೂ ಬೇಡ್ವಾ ಮೋದಿ ಎಂದರು.

ಈಗ ಮೋದಿ ಹಿಂದುಳಿದ ಜಾತಿ ಸಮುದಾಯಗಳನ್ನು ಮುಸ್ಲೀಮರ ವಿರುದ್ಧ ಎತ್ತಿಕಟ್ಟಲು ಭಯನಾಕ ಸುಳ್ಳು ಸೃಷ್ಟಿಸಿದ್ದಾರೆ. ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡ್ತಾರೆ ಎನ್ನುವ ಭತಾನಕ ಸುಳ್ಳು ಹೇಳಿದ ಮೋದಿಯವರಿಗೆ ನಾಚಿಕೆ ಅನ್ನೋದೇ ಇಲ್ಲ ಎಂದರು.

ಪ್ರತಿ ಭಾರತೀಯರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿ ಪ್ರತಿ ಭಾರತೀಯರ ಹಣೆಗೆ ಮೂರು ನಾಮ ತಿಕ್ಕಿದ್ರು. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ನಂಬಿಸಿ ಕೆಲಸ ಕೇಳಿದ್ರೆ ಪಕೋಡ ಮಾರಿ ಅಂತೀರಿ. ಥೂ ನಿಮಗೆ ನಾಚಿಕೆನೇ ಆಗಲ್ವಾ ಎಂದು ಪ್ರಶ್ನಿಸಿದರು.

ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಸ್ತೀವಿ ಅಂದ್ರಿ, ಇಳಿಸಿದ್ರಾ? ಬೆಲೆ ಏರಿಕೆ ತಡಿತೀವಿ ಅಂದ್ರಿ. ತಡೆದ್ರಾ ? ಪ್ರತೀ ಬಾರಿ ರಾಜ್ಯಕ್ಕೆ ಬರೋದು ಹೊಸ ಹೊಸ ಸುಳ್ಳು ಹೇಳಿ ಹೋಗೋದು.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ