Breaking News

ರಾಜ್ಯ ಹೆದ್ದಾರಿ 65ರಲ್ಲಿ ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ

Spread the love

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಹಾಳು ಗ್ರಾಮದ ಬಳಿಯ ರಾಜ್ಯ ಹೆದ್ದಾರಿ 65ರಲ್ಲಿ ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ.ಒಂದು ಬಸ್ ಚನ್ನಗಿರಿಯಿಂದ ಭದ್ರಾವತಿಯತ್ತ ಹೊರಟಿತ್ತು. ಮತ್ತೊಂದು ಬಸ್ ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಹೋಗುತ್ತಿತ್ತು. ಜೋಳದಹಾಳು ಗ್ರಾಮದ ಬಳಿಯ ತಿರುವಿನಲ್ಲಿಎರಡೂ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಹಿಂದೆ ಬರುತ್ತಿದ್ದ ವ್ಯಾನ್ ದಿಢೀರ್ ಬ್ರೇಕ್ ಹಾಕಿದ್ದರಿಂದ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದಿದೆ.

ಬಸ್ ಗಳಲ್ಲಿದ್ದ 40 ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.


Spread the love

About Laxminews 24x7

Check Also

ಗಣೇಶ ಮೂರ್ತಿಗಳ ವಿಸರ್ಜನೆಗೆ ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಸೂಕ್ತ ವ್ಯವಸ್ಥೆ ಮಲಗೌಡಾ ಪಾಟೀಲ ಸೂಚನೆ …

Spread the love ಗಣೇಶ ಮೂರ್ತಿಗಳ ವಿಸರ್ಜನೆಗೆ ಅಳತಗಾ ಸೇತುವೆ ಸಿದ್ಧತೆಗೆ ಅಗತ್ಯ ಕ್ರಮಕ್ಕೆ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ