Breaking News

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ

Spread the love

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ

ಬೆಂಗಳೂರು: 2023 -24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 ಎಪ್ರಿಲ್ 29 ರಿಂದ ರಾಜ್ಯದಾತ್ಯಂತ ಆರಂಭವಾಗಲಿದೆ. 84,933 ಬಾಲಕರು, 64,367 ಬಾಲಕಿಯರು ಸೇರಿ ಒಟ್ಟು 1,49,300 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಇದೇ ಮೊದಲ ಬಾರಿಗೆ ಮೂರು ಬಾರಿ ಪರೀಕ್ಷೆ ಬರೆದು ಯಾವ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುತ್ತದೆಯೋ ಅದನ್ನು ಉಳಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ

ಈಗಾಗಲೇ ಪರೀಕ್ಷೆ ಒಂದು ಬರೆದು ಪಾಸಾಗಿದ್ದರೂ ಕೂಡ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಅವಕಾಶ ಇದೆ. ಪರೀಕ್ಷೆ 2ರ ಫಲಿತಾಂಶ ಸಮಾಧಾನ ತರದಿದ್ದಲ್ಲಿ ಮೇನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 3 ಬರೆಯಬಹುದಾಗಿದೆ.

ಮೇ 14 ರವರೆಗೆ ಬೆಂಗಳೂರಿನ 39 ಸೇರಿ ರಾಜ್ಯದಾತ್ಯಂತ 301 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ 1ರಲ್ಲಿ ಅನುತ್ತೀರ್ಣರಾಗಿದ್ದ 89,221 ವಿದ್ಯಾರ್ಥಿಗಳು, ಹಿಂದಿನ ಪರೀಕ್ಷೆಯ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು 32,848 ವಿದ್ಯಾರ್ಥಿಗಳು, 27,092 ಪುನರಾವರ್ತಿತ ವಿದ್ಯಾರ್ಥಿಗಳು, ಪರೀಕ್ಷೆ 1ರ ವೇಳೆ ಶೇಕಡ 75 ರಷ್ಟು ಹಾಜರಾತಿ ಇಲ್ಲದೆ ಪರೀಕ್ಷೆಯಿಂದ ವಂಚಿತರಾಗಿದ್ದ 139 ಮಂದಿ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ