Breaking News

ಮೇ 07 ರಂದು ‘ಲೋಕಸಭಾ ಚುನಾವಣೆ’ಗೆ 2 ನೇ ಹಂತದ ಮತದಾನ : ರಾಜ್ಯದ ಈ ಜಿಲ್ಲೆಗಳಲ್ಲಿ ‘ಸರ್ಕಾರಿ ರಜೆ’ ಘೋಷಣೆ

Spread the love

ಬೆಂಗಳೂರು : ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಆದೇಶಿಸಿದೆ.

ಮೇ 07 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಹಾಗೂ ಇತರ ಸಂಸ್ಥೆಗಳು ಮತದಾನ ದಿನದಂದು ನೌಕರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

BIG NEWS : ಮೇ 07 ರಂದು 'ಲೋಕಸಭಾ ಚುನಾವಣೆ'ಗೆ 2 ನೇ ಹಂತದ ಮತದಾನ : ರಾಜ್ಯದ  ಈ ಜಿಲ್ಲೆಗಳಲ್ಲಿ 'ಸರ್ಕಾರಿ ರಜೆ' ಘೋಷಣೆ

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಗುಣವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ರಜೆ ಘೋಷಣೆ
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ