Breaking News

ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಬಿಜೆಪಿ ಸಹಾಯ ಮಾಡಿದೆ; ಪ್ರಿಯಾಂಕ್ ಖರ್ಗೆ

Spread the love

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ದೇಶ ತೊರೆದಿದ್ದಾರೆ ಎಂಬ ವರದಿಗಳ ನಡುವೆ, ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪಾದಿತ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ರಕ್ಷಿಸಿ ಬಿಜೆಪಿಯೇ ವಿದೇಶಕ್ಕೆ ಕಳಿಸಿದೆ ಎನ್ನಲಾಗುತ್ತಿದೆ.

ಆರೋಪಿಯನ್ನು ರಕ್ಷಿಸುವುದು ಯಾವ ನ್ಯಾಯ ಎಂದು ಸೋಮವಾರ ಹೇಳಿದ್ದಾರೆ.

 

ಪ್ರಜ್ವಲ್ ರೇವಣ್ಣ ಅವರ ಹಿಂದಿನ ಮನೆಯ ಸಹಾಯಕರು ನೀಡಿದ ದೂರಿನ ಮೇರೆಗೆ ಭಾನುವಾರ ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಲಾಗಿದೆ.

ಎಎನ್‌ಐ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ‘ಅವರು (ಬಿಜೆಪಿ) ಪ್ರಜ್ವಲ್ ರೇವಣ್ಣ ದೇಶದಿಂದ ಫಲಾಯನ ಮಾಡಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಇಂದು, ವದಂತಿಗಳು ಹರಿದಾಡುತ್ತಿರುವಂತೆ ಅವರು ದೇಶವನ್ನು ತೊರೆದಿದ್ದರೆ, ಅವರು ಹೇಗೆ ದೇಶವನ್ನು ತೊರೆದರು? ಅದಕ್ಕೆ ಸಹಕರಿಸಿದವರು ಯಾರು? ಈ ನಿಟ್ಟಿನಲ್ಲಿ ಬಿಜೆಪಿಯನ್ನು ನಾನು ನೇರವಾಗಿ ದೂಷಿಸುತ್ತೇನೆ ಎಂದರು.

 


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ