Breaking News

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love

ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸ ನಮ್ಮ ರಾಜ್ಯದಲ್ಲಿ ಆಗಿದ್ದು ಖೇದಕರ ಎಂದು ಪ್ರಜ್ವಲ್ ರೇವಣ್ಣ ವಿಡಿಯೋ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿಯ ಗೃಹ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋ ಹರಿದಾಡುತ್ತಿವೆ.

ಈ ಎಲ್ಲ ವಿಚಾರಗಳನ್ನು ಹಾಸನ ಬಿಜೆಪಿ ಮುಖಂಡ ದೇವರಾಜಗೌಡ ಡಿಸೆಂಬರ್ ‌ಸಮಯದಲ್ಲೇ ವಿಜಯೇಂದ್ರ ಗಮನಕ್ಕೆ ತಂದಿದ್ದರು. ಮಾಜಿ ಶಾಸಕ ಪ್ರೀತಂಗೌಡ ಕೂಡ ಈ ಎಲ್ಲ ವಿಚಾರಗಳನ್ನು ಅಮಿತ್ ಶಾ ಗಮನಕ್ಕೆ ತಂದಿದ್ದರು. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ರಾಜಕೀಯ ‌ಲಾಭಕ್ಕಾಗಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರು ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಹಾಸನದ ಹಾಲಿ ಸಂಸದರಾಗಿದ್ದಾರೆ. ಅವರ ಅಧಿಕಾರ ದುರುಪಯೋಗವಾಗಿದೆ. ಅಧಿಕಾರ ದರ್ಪ, ಆಸೆ ಆಮೀಷ ತೋರಿಸಿ ನೂರಾರು ಮಹಿಳೆಯರ ದುರುಪಯೋಗವಾಗಿದೆ. ವಿಡಿಯೋ ನೋಡಿದರೆ ಮಹಿಳೆಯರ ಜೀವಂತ ಕೊಲೆಯಾಗಿದೆ ಅನಿಸುತ್ತದೆ. ವಿಡಿಯೋ ಶೇರ್ ಮಾಡಲು ಹೋಗಬೇಡಿ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತದೆ ಎಂದು ಹೆಬ್ಬಾಳ್ಕರ್ ಹೇಳಿದರು.

 


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ