Breaking News

ಗೃಹಲಕ್ಷ್ಮೀ ಯೋಜನೆ 80 ಸಾವಿರ ಅರ್ಜಿ ತಿರಸ್ಕಾರ

Spread the love

ಗೃಹಲಕ್ಷ್ಮೀ ಯೋಜನೆಯ ಮೂಲಕ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ಹಣ ಬ್ಯಾಂಕ್‌ ಖಾತೆಗೆ ಜಮೆ ಆಗುತ್ತಿದೆ. ಆದ್ರೆ ಇದುವರೆಗೆ ಹಣ ಪಡೆದು ಕೊಂಡ ಎಲ್ಲರಿಗೂ ಕೂಡ ಗೃಹಲಕ್ಷ್ಮೀಯೋಜನೆಯ ಹಣ ಸಿಗುತ್ತೆ ಅನ್ನೋ ಗ್ಯಾರಂಟಿ ಇಲ್ಲ.

ಅದ್ರಲ್ಲೂ ಯೋಜನೆಗೆ ಅರ್ಜಿ ಸಲ್ಲಿಸಿದ 80 ಸಾವಿರ ಮಹಿಳೆಯರ ಅರ್ಜಿ ತಿರಸ್ಕಾರಗೊಂಡಿದೆ.

ಕರ್ನಾಟಕದಲ್ಲಿ ಸುಮಾರು ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಮೂಲಕ ಹಣವನ್ನು ಪಡೆದುಕೊಂಡಿರುವ 26 ಸಾವಿರ ಮಹಿಳೆಯರ ಖಾತೆಗೆ ಇನ್ಮುಂದೆ ಹಣ ಜಮೆ ಆಗೋದಿಲ್ಲ. ಆದಾಯ ತೆರಿಗೆ ಪಾವತಿದಾರರಾಗಿದ್ದರೂ ಕೂಡ ಸುಮಾರು 14 ಸಾವಿರ ಮಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ (DBT) ಮಾಡುವ ಮೂಲಕ ಹಣವನ್ನು ಪಡೆದುಕೊಂಡಿದ್ದರು. ಆದರೆ ಇನ್ಮುಂದೆ ಇಂತಹ ಮಹಿಳೆಯರ ಖಾತೆಗೆ ಹಣ ಜಮೆ ಆಗೋದಿಲ್ಲ.

ಗೃಹಲಕ್ಷ್ಮೀ ಯೋಜನೆ 80 ಸಾವಿರ ಅರ್ಜಿ ತಿರಸ್ಕಾರ :ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ಸಿಗುತ್ತೆ ಹಣ

ಸರಕಾರಿ ನೌಕರರು, ಆದಾಯ ತೆರಿಗೆ ಪಾವತಿ ಮಾಡುವವರು ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆಯೋದಿಲ್ಲ ಎಂದು ಮೊದಲೇ ಸೂಚಿಸಲಾಗಿತ್ತು. ಆದರೂ ಕೂಡ 80 ಸಾವಿರಕ್ಕೂ ಅಧಿಕ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿರುವುದು ಇದೀಗ ದಾಖಲೆಗಳಿಂದ ಬಯಲಾಗಿದೆ. ಇದೇ ಕಾರಣಕ್ಕೆ ಇನ್ಮುಂದೆ ಈ ಮಹಿಳೆಯರ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಮಾನ್ಯವಾಗುವುದಿಲ್ಲ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ