Breaking News

ಪ್ರಜ್ವಲ್ ರೇವಣ್ಣ ಬಗ್ಗೆ ಅಮಿತ್ ಶಾ ಕೆಂಡಾಮಂಡಲ,

Spread the love

ಗುವಾಹಟಿ: ಪ್ರಜ್ವಲ್ ರೇವಣ್ಣ ಲೈಂಗಿಕ ವಿಡಿಯೋ ಹಗರಣದ (Prajwal Revanna Sex Scandal Case) ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೆಂಡಾಮಂಡಲವಾಗಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಲೈಂಗಿಕ ವಿಡಿಯೋ ಹಗರಣವನ್ನು ನಾವು ಸಹಿಸಲ್ಲ, ಇದೊಂದು ಆಘಾತಕಾರಿ ಘಟನೆ” ಎಂದು ಸ್ಪಷ್ಟಪಡಿಸಿದ್ದಾರೆ.

 

ಬಿಜೆಪಿಯ ನಿಲುವು ಬಹಳ ಸ್ಪಷ್ಟವಾಗಿದ್ದು, ಭಾರತೀಯ ಸ್ತ್ರೀಯರ ಬಗ್ಗೆ ನಮ್ಮ ಗೌರವ ಅಪಾರವಾಗಿದೆ ಎಂದು ಅವರು ಪ್ರಜ್ವಲ್ ರೇವಣ್ಣ ಲೈಂಗಿಕ ವಿಡಿಯೋ ಹಗರಣದಿಂದ ಅಂತರ ಕಾಯ್ದುಕೊಂಡಿದ್ದಾರೆ.

ಅಮಿತ್ ಶಾ ಮಾತುಗಳಿವು
“ನಾವು ದೇಶದ ಮಾತೃಶಕ್ತಿ ಜೊತೆ ನಿಲ್ಲುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ ಎಂದು ಕಾಂಗ್ರೆಸ್ ಅನ್ನು ಕೇಳಲು ಬಯಸುತ್ತೇನೆ. ಇದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾದ ಕಾರಣ ಕೇಂದ್ರ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕಿಲ್ಲ. ಆದರೆ ತನಿಖೆಯ ಪರ ನಾವು ಇರಲಿದ್ದೇವೆ. ಜೆಡಿಎಸ್ ಜೊತೆ ನಮ್ಮ ಮೈತ್ರಿಯಿದ್ದರೂ, ಜನತಾದಳ ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ಕುರಿತು ತಿಳಿಸಿದೆ”

 


Spread the love

About Laxminews 24x7

Check Also

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,

Spread the love ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶೇಡಬಾಳ ಗ್ರಾಮದ ಬಸವಣ್ಣ ದೇವಾಲಯ ಆವರಣದಲ್ಲಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ