Breaking News

ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Spread the love

ಚಿಕ್ಕಬಳ್ಳಾಪುರ: ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ತಾಲೂಕು ಪಂಚಾಯತ್ ಇಒ ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಪಂಚಾಯತ್ ನಲ್ಲಿ ನಡೆದಿದೆ.

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಶಿಡ್ಲಘಟ್ಟ ತಾಲೂಕು ಪಂಚಾಯತ್ ನ ಇಒ ಮುನಿರಾಜು ಲೋಕಾಯುಕ್ತ ಬಲೆಗೆ ಬಿದ್ದ ಅದಿಕಾರಿಯಾಗಿದ್ದಾರೆ.

ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿ ಗ್ರಾಮದ 39 ಗುಂಟೆ ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ನಂಜೇಗೌಡ ಎಂಬುವರಿಂದ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಅದರಂತೆ ಇಂದು ಒಂದೂವರೆ ಲಕ್ಷ ಹಣ ನೀಡಲು ಮಾತುಕತೆ ನಡೆದಿತ್ತು ಅದರಂತೆ ನಂಜೇಗೌಡ ಅವರು ಮುನಿರಾಜು ಅವರ ಕಚೇರಿಯಲ್ಲಿ ಹಣ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿ ಮೋಹನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ