Breaking News

ಬಸ್ ನಂಬಿ ರೋಡಿಗಿಳಿಯೋ ಮುನ್ನ ಎಚ್ಚರವಾಗಿರಿ.

Spread the love

ಬೆಂಗಳೂರು: ಬಸ್ ನಂಬಿ ರೋಡಿಗಿಳಿಯೋ ಮುನ್ನ ಎಚ್ಚರವಾಗಿರಿ. ಯಾಕಂದ್ರೆ ಸಾರಿಗೆ ನೌಕರರು ಇಂದು ಮತ್ತೆ ಬೀದಿಗಿಳಿಯುತ್ತಿದ್ದಾರೆ. ಸರ್ಕಾರಿ ನೌಕರರನ್ನಾಗಿ ಘೋಷಿಸುವಂತೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಬೃಹತ್ ಪತ್ರ ಚಳುವಳಿ ನಡೆಯಲಿದೆ. ನಾಲ್ಕು ನಿಗಮಗಳ 1 ಸಾವಿರಕ್ಕೂ ಹೆಚ್ಚು ಸಾರಿಗೆ ನೌಕರರಿಂದ ಇಂದು ಮಧ್ಯಾಹ್ನ 1 ಗಂಟೆಗೆ ಫ್ರೀಡಂಪಾರ್ಕ್ ನಲ್ಲಿ ಸೇರಲಿದ್ದಾರೆ.

ಕಳೆದ 8 ತಿಂಗಳ ಹಿಂದೆಯೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸುವಂತೆ ಕೂಗು ಎದ್ದಿತ್ತು. ಈ ಕೂಗಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭರವಸೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನ ಕೈ ಬಿಟ್ಟಿದ್ದ ಸಾರಿಗೆ ನೌಕರರು, ಸಚಿವರ ಭರವಸೆ ಈಡೇರದ ಹಿನ್ನೆಲೆಯಲ್ಲಿ ಇಂದು ಪತ್ರ ಚಳುವಳಿಯ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ