Breaking News

ರಾಕೇಶ್‌ ಸಾವಿನ ರಹಸ್ಯವೂ ಬಯಲಾಗಲಿದೆ.’ ಎಂದ ಹೆಚ್‌ಡಿಕೆ!

Spread the love

ಹುಬ್ಬಳ್ಳಿ: ಹಾಸನದ ಸಂಸದ ಹೆಚ್‌ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್‌ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪುತ್ರ ರಾಕೇಶ್‌ ಸಿದ್ದರಾಮಯ್ಯ ಅವರ ಸಾವಿನ ರಹಸ್ಯವನ್ನೂ ಬಯಲಿಗೆ ತರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌ಡಿಕೆ, ಸಿದ್ದರಾಮಯ್ಯ ಅವರ ಮನೆಯಲ್ಲಿ ನಡೆದ ವಿಚಾರವನ್ನು ಹೊರಗಡೆ ತರುತ್ತೇನೆ. ರಾಕೇಶ್‌ ಸಿದ್ದರಾಮಯ್ಯ ಅವರ ಸಾವಿನ ಸಂದರ್ಭ ನಡೆದ ವಿಚಾರವನ್ನು ಬಯಲಿಗೆ ತರುವುದಾಗಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನೂ ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದಿದ್ದಾರೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ