Breaking News

7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Spread the love

ಗೋಕರ್ಣ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜನಪ್ರತಿನಿಧಿಗಳು ನಾವು ಜನರ ಕೆಲಸ ಮಾಡಿದ್ದೇವೆ ಎನ್ನುವ ಕಾರಣಕ್ಕಾಗಿ ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಅದಕ್ಕೆ ಉದಾಹರಣೆಯೆಂದರೆ ಮಂಜಗುಣಿ ಗಂಗಾವಳಿ ನಡುವಿನ ಸೇತುವೆ ಸಂಪರ್ಕ ರಸ್ತೆಯೂ ಒಂದು.

ಇಲ್ಲಿ ಕೂಡು ರಸ್ತೆಗೆ ಮಂಜಗುಣಿಯಲ್ಲಿ ಮಣ್ಣು ಹಾಕದಿದ್ದರೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ ಎಂದು ಶಾಸಕರಾದ ಸತೀಶ ಸೈಲ್, ದಿನಕರ ಶೆಟ್ಟಿ ಹೇಳಿರುವುದು ಈಗ ಜನಾಕ್ರೋಶಕ್ಕೆ ಕಾರಣವಾಗಿದೆ.

ಈ ಸೇತುವೆ ಕಾಮಗಾರಿ ಆರಂಭಗೊಂಡು 7 ವರ್ಷ ಕಳೆದಿದೆ. ಆದರೆ ಕೇವಲ ಸೇತುವೆಯನ್ನು ಪೂರ್ಣಗೊಳಿಸಿ ಜೋಡುರಸ್ತೆಗಳನ್ನು ಮಾಡದೇ ಹಾಗೇ ಬಿಡಲಾಗಿತ್ತು. ಹೀಗಾಗಿ ಸ್ಥಳೀಯರು ಅನೇಕ ಬಾರಿ ಪ್ರತಿಭಟನೆಯನ್ನು ಕೂಡ ಮಾಡಿದ್ದರು. ಮಳೆಗಾಲದ ಹಿನ್ನೆಲೆಯಲ್ಲಿ ಕಳೆದ ವರ್ಷ ತಾತ್ಕಾಲಿಕವಾಗಿ ದ್ವಿಚಕ್ರ ವಾಹನ ಸಂಚರಿಸಲು ಅನುಕೂಲ ಮಾಡಿಕೊಟ್ಟಿದ್ದರು.


Spread the love

About Laxminews 24x7

Check Also

ಮಳೆಯ ಪ್ರಮಾಣ ಆಧರಿಸಿ ನೀರು ಬಿಡುಗಡೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ