Breaking News

3 ತಿಂಗಳ ಹಿಂದೆಯೇ ಪ್ರಜ್ವಲ್ ರೇವಣ್ಣ ವಿಡಿಯೋ ಗುಟ್ಟು ರಟ್ಟು ಮಾಡಿದ್ದ ಬಿಜೆಪಿ ನಾಯಕ

Spread the love

ಬೆಂಗಳೂರು/ಹಾಸನ, (ಏಪ್ರಿಲ್ 30): ಹಾಸನ (Hassan) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ಪೆನ್‌ಡ್ರೈವ್‌ ಪ್ರಕರಣ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಪ್ರಕರಣದ ತನಿಖೆಯನ್ನ ರಾಜ್ಯ ಸರ್ಕಾರ ನೇಮಿಸಿರೋ SIT ಹೊತ್ತುಕೊಂಡಿದೆ.

3 ತಿಂಗಳ ಹಿಂದೆಯೇ ಪ್ರಜ್ವಲ್ ರೇವಣ್ಣ ವಿಡಿಯೋ ಗುಟ್ಟು ರಟ್ಟು ಮಾಡಿದ್ದ ಬಿಜೆಪಿ ನಾಯಕ

ವಿಡಿಯೋಗಳ ಸತ್ಯಾಸತ್ಯತೆ ಸೇರಿದಂತೆ ಹಲವು ಆಯಾಮಗಳಲ್ಲಿ ಎಡಿಜಿಪಿ ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ತನಿಖೆ ತೀವ್ರಗೊಂಡಿದೆ. ವಿಡಿಯೋ ಬಿಡುಗಡೆ ಮಾಡಿದ್ಯಾರು? ಮೊಬೈಲ್​ನಿಂದ ಪೆನ್​ಡ್ರೈವ್​ಗೆ ಹೇಗೆ ಬಂದವು? ಹೀಗೆ ಹತ್ತಾರು ಆಯಾಮಗಳಲ್ಲಿ ಎಸ್​ಐಟಿ ತನಿಖೆ ನಡೆಸುತ್ತಿದೆ. ಇದರ ಮಧ್ಯೆ ಪ್ರಜ್ವಲ್ ರೇವಣ್ಣ ಅವರದ್ದು ಅಶ್ಲೀಲ ವಿಡಿಯೋಗಳ ಇವೆ ಎನ್ನುವುದು ಗೊತ್ತಾಗಿದ್ದೆ ಕಳೆದ ಮೂರು ತಿಂಗಳ ಹಿಂದೆ. ಹೌದು…ಶತ್ರುವಿನ ಶತ್ರು ವಿತ್ರ ಎನ್ನುವಂತೆ ಬಿಜೆಪಿ ನಾಯಕ, ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಎಚ್​ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿ ಸೋಲುಕಂಡಿದ್ದ ವಕೀಲ ದೇವರಾಜೇಗೌಡ ಅವರೇ 2024, ಜನವರಿ 11ರಂದು ಸುದ್ದಿಗೋಷ್ಠಿ ನಡೆಸಿ ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳಿವೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆಂದು ಎಚ್​ಡಿ ರೇವಣ್ಣ ಅವರಿಗೆ ಎಚ್ಚರಿಕೆ ನೀಡಿದ್ದರು.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ