Breaking News

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the love

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಬಿಟ್ಟು ಕೆಳಗೆ ಇಳಿರಿ ಕೇವಲ 24 ಗಂಟೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬಿಡಿ ಅಧಿಕಾರದಿಂದ ಇಳೀರಿ ನೀವು 24 ಗಂಟೆಯಲ್ಲಿ ಅವರನ್ನ ನಾವು ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. ಅಧಿಕಾರದಿಂದ ಬಿಟ್ಟು ಇಳೀರಿ. ನಿಮ್ಮ ಯೋಗ್ಯತೆಗೆ ಅವರನ್ನ ಬಿಟ್ಟು ಕಳುಹಿಸಿದ್ದೀರಿ.

ಪ್ರಜ್ವಲ್ ನಮ್ಮ ಎಂಪಿ ಅಲ್ಲ. ಅವರು ಕೈ ಬೆಂಬಲಿತ ಎಂಪಿ ನಮ್ಮ ಎಂಪಿ ಆಗಲು ಇನ್ನೂ ಒಂದು ತಿಂಗಳು ನಾಲ್ಕು ದಿನ ಬಾಕಿ ಇದೆ. ನಮ್ಮ ಎಂಪಿಯಾಗಿ ಆಯ್ಕೆಯಾದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಆರ್ ಅಶೋಕ್ ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ