Breaking News

ನಾನು ವಲಸೆ ಬಂದ ಮನುಷ್ಯ ಅಲ್ಲ. ಮೂವತ್ತು ವರ್ಷದಿಂದ ಪಕ್ಷದಲ್ಲಿದ್ದೇನೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್

Spread the love

ಧಾರವಾಡ: ನಾನು ವಲಸೆ ಬಂದ ಮನುಷ್ಯ ಅಲ್ಲ. ಮೂವತ್ತು ವರ್ಷದಿಂದ ಪಕ್ಷದಲ್ಲಿದ್ದೇನೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.ಸಂಪುಟ ಪುನರ್ ರಚನೆಯಲ್ಲಿ ಸಚಿವ ಸ್ಥಾನ ಕೈ ತಪ್ಪುವ ವಿಚಾರ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಮನೆಯಿಂದ ಸೀದಾ ಬಿಜೆಪಿಗೆ ಬಂದವನು. ನನ್ನಲ್ಲಿ ಕೊರತೆ ಏನಿಲ್ಲ, ನಾನು ಕೆಲಸ ಮಾಡುತ್ತಿರುವೆ. ಹೈಕಮಾಂಡ್ ಮೇಲೆ ನನಗೆ ಸಂಪೂರ್ಣ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಧ್ಯಮಗಳ ಮೂಲಕ ಮಾತ್ರ ನಮ್ಮನ್ನು ತೆಗೆಯುತ್ತಾರೆ ಅಂತ ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ಸಿಎಂ, ಹೈಕಮಾಂಡ್ ಮತ್ತು ರಾಜ್ಯಾಧ್ಯಕ್ಷರು ನಮಗೆ ಏನೂ ಹೇಳಿಲ್ಲ. ನಾನು ಪಕ್ಷದ ಕಾರ್ಯಕರ್ತ ಶಿಸ್ತಿನ ಸಿಪಾಯಿ. ಹೈಕಮಾಂಡ್ ನಿರ್ಣಯಕ್ಕೆ ವಚನ ಬದ್ಧನಾಗಿರುವೆ ಎಂದರು.

ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್‍ವೈ ಹೇಳಿದ್ದಾರೆ. ಅವರು ಪುನರ್ ರಚನೆ ಅಂತ ಹೇಳಿದ್ದಾರೆ. ನಮ್ಮ ಪಕ್ಷದ ಯಾರ ಯಾರಿಗೆ ಏನು ವಾಗ್ದಾನ ಮಾಡದ್ದಾರೆ ಅದನ್ನೆಲ್ಲ ಸಿಎಂ ಅವರು ಮಾಡೇ ಮಾಡುತ್ತಾರೆ ಎಂಬ ನಂಬಿಕೆ ಎಂದು ಚೌಹ್ಹಾಣ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ