Breaking News

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಡಿಕೆಶಿ ಕೈವಾಡ

Spread the love

ಬೆಂಗಳೂರು: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ ಅವರ ಮೇಲೆ ಹಾಕುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ ರಮೇಶ್ ಬಾಬು ಕಿಡಿಕಾರಿದ್ದಾರೆ.

ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಕಲೆ‌ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ.

ಎಸ್‌ಐಟಿ ನೀಡಿದ ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್‌ ರೇವಣ್ಣ ಪತ್ತೆಯಾಗದಿದ್ದರೆ, ಅವರ ಪತ್ತೆಗೆ ಕೋರ್ಟ್‌ನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ