Breaking News

ದೇವೇಗೌಡರ ಕುಟುಂಬದವರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮಾಜಿ ಸಿಎಂ ಮೊಯ್ಲಿ ಆಕ್ರೋಶ

Spread the love

ಬೆಳಗಾವಿ : ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಿಡಿ ಕಾರಿದ್ದು, ದೇವೇಗೌಡರ ಕುಟುಂಬ ಸದಸ್ಯರು ಹಾಸನದಲ್ಲಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಿಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿತ್ತು. ಈಗ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22 ಲಕ್ಷ ದಾಟಿದೆ. ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅಧಿಕವಾಗಿವೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಎಲ್ಲ ಸೂತ್ರದಾರರು ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ತಿದ್ದಾರೆ ಎಂದು ಕಿಡಿ ಕಾರಿದರು.

ದೇವೇಗೌಡರ ಮಗ, ಮೊಮ್ಮಗನಿಂದ ಒಂದಲ್ಲ, ಎರಡು ಸಾವಿರ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಒಂದು ಕಡೆ ಪ್ರಧಾನಿ ಮೋದಿ ನಾರಿಶಕ್ತಿ, ಬೇಟಿ ಪಡಾವೋ ಭೇಟಿ ಬಚಾವೋ ಅಂತಾರೆ, ಇನ್ನೊಂದು ಇವರು ಈ ರೀತಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

Spread the loveಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ