ಶಿವಮೊಗ್ಗ: 18ನೇ ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದಾರೆ.
ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದ ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ಪ್ರಚಾರ ನಡೆಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಸ್ಪರ್ಧಿಸುತ್ತಿದ್ದು, ಪತ್ನಿ ಪರ ಶಿವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಿವರಾಜ್ಕುಮಾರ್ ತಾವು ರಾಹುಲ್ ಗಾಂಧಿ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ.
Laxmi News 24×7