Breaking News

‘ಇಂಡಿಯಾ’ ಅಧಿಕಾರಕ್ಕೆ; 10ರಿಂದ 15 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಪತನ: ಖೇರಾ

Spread the love

ಣಜಿ: ಈ ಬಾರಿಯ ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, 10 ರಿಂದ 15 ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಪವನ್‌ ಖೇರಾ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಾಂತರವನ್ನು ರದ್ದುಗೊಳಿಸಲು ಮತ್ತು ಪಕ್ಷಗಳನ್ನು ಬದಲಾಯಿಸುವ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಸಂವಿಧಾನದ 10ನೇ ಷೆಡ್ಯೂಲ್‌ಗೆ ತಿದ್ದುಪಡಿಯನ್ನು ಇಂಡಿಯಾ ಮೈತ್ರಿಕೂಟ ಮಾಡಲಿದೆ’ ಎಂದು ತಿಳಿಸಿದ್ದಾರೆ.

ಪಕ್ಷಾಂತರಿಗಳನ್ನು ಅನರ್ಹಗೊಳಿಸಲಾಗುವುದು. ಜುಲೈ 4ರಂದು ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸರ್ಕಾರ ಪತನಗೊಳ್ಳಲಿದೆ. ದೇಶದಾದ್ಯಂತ ಪಕ್ಷಾಂತರದಲ್ಲಿ ತೊಡಗುವ ಮೂಲಕ ಬಿಜೆಪಿ, ಪ್ರಜಾಪ್ರಭುತ್ವವನ್ನು ಅಣಕಿಸಿದೆ ಎಂದು ಅವರು ಹೇಳಿದ್ದಾರೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿದ ಖೇರಾ, ಇದು ವಿಶ್ವದ ಅತಿದೊಡ್ಡ ಲೈಂಗಿಕ ಶೋಷಣೆ ಪ್ರಕರಣವಾಗಿದೆ. ಪ್ರಜ್ವಲ್‌ ಅವರ ಪಾಸ್‌ ಪೋರ್ಟ್‌ ರದ್ದುಪಡಿಸಿ ಭಾರತಕ್ಕೆ ಕರೆತಂದು ಪೊಲೀಸರಿಗೆ ಒಪ್ಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿದಂತೆ ಎಲ್ಲರೂ ಈ ಘಟನೆಯನ್ನು ಖಂಡಿಸಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ