Breaking News

ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Spread the love

ಶಿವಮೊಗ್ಗ: ಈಶ್ವರಪ್ಪ ಮೋದಿ ಫೋಟೋವನ್ನು ಬಳಕೆ ಮಾಡುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಬಿಜೆಪಿಯವರು ಕೋರ್ಟ್‌ ಹಾಗೂ ಚುನಾವಣೆ ಆಯೋಗಕ್ಕೆ ದೂರು ಕೊಟ್ಟಿದ್ದರು.

ಆದರೆ ಚುನಾವಣೆ ಆಯೋಗ ಮತ್ತು ಕೋರ್ಟ್‌ ಬಿಜೆಪಿಯ ಆಕ್ಷೇಪಕ್ಕೆ ಸೊಪ್ಪು ಹಾಕಿಲ್ಲ ಎಂದು ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.

ವಿಶ್ವ ನಾಯಕರಾಗಿರುವ ಅವರ ಫೋಟೋ ಬಳಸಿಕೊಳ್ಳುವ ಅಧಿಕಾರ ಈಶ್ವರಪ್ಪಗೆ ಮಾತ್ರ ಅಲ್ಲ, ದೇಶದ 140 ಕೋಟಿ ಜನರಿಗೂ ಇದೆ. ಇದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ