Breaking News

ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Spread the love

ಬೆಳಗಾವಿ: ಹುಬ್ಬಳ್ಳಿಯ ನೇಹಾ ಹಿರೇಮಠ ಮತಾಂತರವಾಗಲು ಒಪ್ಪದಿದ್ದಕ್ಕೆ ಹತ್ಯೆಯಾಗಿದೆ. ಈ ಪ್ರಕರಣಕ್ಕೆ ಸರಿಯಾಗಿ ನ್ಯಾಯ ಸಿಗಬೇಕು ಎಂದರೆ ಸಿಬಿಐಗೆ ವಹಿಸಬೇಕು. ಆಗ ಅನ್ಯಾಯ ಮಾಡಿದವರನ್ನು ತಲೆ ಕೆಳಗೆ ಮಾಡಿ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದರು.

 ಅಮಿತ್ ಶಾ, ನೇಹಾ ಪ್ರಕರಣವನ್ನು ಭಾಷಣದಲ್ಲಿ ಉಲ್ಲೇಖಿಸಿದರು.

ನೇಹಾ ಹಿರೇಮಠ ಕೇಸ್ ವೈಯಕ್ತಿಕ ವಿಚಾರ ಅಂತ ಕಾಂಗ್ರೆಸ್ ನವರು ಹೇಳಿದ್ದರು‌. ಇದು ವೈಯಕ್ತಿಕ ಅಲ್ಲ. ಮತಾಂತರ ಆಗದ್ದಕ್ಕೆ ಕೊಲೆಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್-ಎಸ್ ಡಿಪಿಐ ಸಖ್ಯ: ಮೋದಿಯವರು ಈ ದೇಶಕ್ಕೆ ಅಂಟಿದ್ದ ಭಯೋತ್ಪಾದನೆ ನಿರ್ಮೂಲನೆ ಮಾಡಿದರು. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಸ್‌ಡಿಪಿಐ ಸಮರ್ಥನೆ ಮಾಡಿಕೊಳ್ಳುತ್ತಿದೆ. ಎಸ್‌ಡಿಪಿಐ ಸಹಕಾರ ಪಡೆದು ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಟೋಟಗೊಂಡರೆ ಗ್ಯಾಸ್ ಸಿಲಿಂಡರ್ ಸ್ಪೋಟ ಅಂತ ವಾದಿಸಿತ್ತು. ಎನ್‌ಐಎ ತಂಡ ಬಂದು ಎಸ್‌ಡಿಪಿಐ ಅವರೇ ಬ್ಲಾಸ್ಟ್ ಮಾಡಿದ್ದು ಎಂದು ಸತ್ಯ ಹೊರ ಹಾಕಿದೆ. ನೀವು ಚಿಂತೆ ಮಾಡಬೇಡಿ ಕಾಂಗ್ರೆಸ್ ಸರ್ಕಾರ ಎನೇ ಮಾಡಲಿ‌, ನೀವು ಅಣ್ಣಾಸಾಹೇಬ ಜೊಲ್ಲೆಗೆ ಮತ ನೀಡಿ ಅವರನ್ನು ಗೆಲ್ಲಿಸಿ. ಮತ್ತೊಮ್ಮೆ ಮೋದಿಯನ್ನು ಪ್ರಧಾನಿ ಮಾಡಿ, ಮೋದಿಯವರು ಕರ್ನಾಟಕವನ್ನು ರಕ್ಷಣೆ ಮಾಡುತ್ತಾರೆ ಎಂದು ಶಾ ಹೇಳಿದರು.

 


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ