Breaking News

ಗರ್ಭಿಣಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಇಬ್ಬರಿಗೆ ಗಲ್ಲು ಶಿಕ್ಷೆ

Spread the love

ವಿಜಯಪುರ: 9 ತಿಂಗಳ ಗರ್ಭಿಣಿಯನ್ನು ಕೊಲೆ ಮಾಡಿದ್ದ ಮರ್ಯಾದಾ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಇತರ ಐವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ವಿಜಯಪುರ ಜಿಲ್ಲಾ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

2017ರಲ್ಲಿ ಗರ್ಭಿಣಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಇಬ್ಬರಿಗೆ ಗಲ್ಲು ಶಿಕ್ಷೆ ಮತ್ತು ಇತರೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 4.19 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಮುದ್ದೇಬಿಹಾಳ ತಾಲೂಕಿನ ಗುಂಡಕನಾಳ ಗ್ರಾಮದ ಇಬ್ರಾಹಿಂಸಾಬ ಮಹಮ್ಮದಸಾಬ್ ಅತ್ತಾರ ಹಾಗೂ ಅಕ್ಬರ್ ಮಹಮ್ಮದಸಾಬ್ ಅತ್ತಾರಗೆ ಗಲ್ಲು ವಿಧಿಸಲಾಗಿದ್ದು, ಹತ್ಯೆಗೀಡಾದ ಮಹಿಳೆಯ ತಾಯಿ ರಮಜಾನಬಿ ಅತ್ತಾರ, ಸಂಬಂಧಿಗಳಾದ ದಾವಲಬಿ ಬಂದೇನವಾಜ್ ಜಮಾದಾರ, ಅಜಮಾ ಜಿಲಾನಿ ದಖನಿ, ಜಿಲಾನಿ ಅಬ್ದುಲ್‌ಖಾದರ್ ದಖನಿ, ದಾವಲಬಿ ಸುಭಾನ್ ಧನ್ನೂರಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ