Breaking News

ಅಶ್ಲೀಲ ವಿಡಿಯೋ ಪ್ರಕರಣ: ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧಾರ

Spread the love

ಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನುರಿತ ವಕೀಲರ ಸಲಹೆಯ ಮೇರೆಗೆ ಪ್ರಜ್ವಲ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು, ಮೇ 4: ಅಶ್ಲೀಲ ವಿಡಿಯೋ ಪ್ರಕರಣಕ್ಕೆ (Prajwal Video Case) ಸಂಬಂಧಿಸಿ ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆಯುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ರಕರಣ ಬೆಳಕಿಗೆ ಬಂದ ಸಂದರ್ಭದಲ್ಲೇ ವಿದೇಶಕ್ಕೆ ತೆರಳಿರುವ ಪ್ರಜ್ವಲ್, ಏಪ್ರಿಲ್ 27ರಿಂದ ಇಲ್ಲಿವರೆಗೂ ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ದೆಹಲಿ, ಬೆಂಗಳೂರಿನ ನುರಿತ ವಕೀಲರ ಜೊತೆ ಸಂಪರ್ಕ ಇಟ್ಟುಕೊಂಡಿದ್ದಾರೆ. ಈ ಮಧ್ಯೆ, ವಕೀಲರ ಸಲಹೆಯಂತೆ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವ ರೇವಣ್ಣಗೆ ಇಂದು ಅಗ್ನಿ ಪರೀಕ್ಷೆ

ಈ ಮಧ್ಯೆ, ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಅರ್ಜಿ ಸಲ್ಲಿಸಿರುವ ಮಾಜಿ ಸಚಿವ ಹೆಚ್​​ಡಿ ರೇವಣ್ಣಗೆ ಇಂದು ಅಗ್ನಿ ಪರೀಕ್ಷೆ ಎದುರಾಗಲಿದೆ. ಈ ಸಂಬಂಧ ಜನಪ್ರತಿನಿದಿಗಳ ವಿಶೇಷ ಕೋರ್ಟ್​​​​ನಲ್ಲಿ ನಿರೀಕ್ಷಣಾ ಜಾಮೀನಿಗೆ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನಿಗೆ ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯುವುದಕ್ಕೆ ಸಂಬಂಧಿಸಿದಂಥ ಗಂಭೀರ ಆರೋಪ ಯಾವುದೂ ಇಲ್ಲದ ಕಾರಣ ಅರ್ಜಿ ವಾಪಸ್ ಪಡೆದಿದ್ದರು.

ಇದರ ನಡುವೆ ರೇವಣ್ಣ ವಿರುದ್ಧ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಮಹಿಳೆ‌ಯ ಕಿಡ್ನಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಎರಡನೇ ಆರೋಪಿಯನ್ನು ಈಗಾಗಲೇ ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದಾರೆ. ರೇವಣ್ಣ ಕರೆತರಲು ಹೇಳಿದ್ದಾರೆಂದು ಸಂತ್ರಸ್ತ ಮಹಿಳೆಯನ್ನು ಎರಡನೇ ಆರೋಪಿ ಸತೀಶ್ ಬಾಬು ಕರೆದೊಯ್ದಿದ್ದ ಎಂದು ಮಹಿಳೆಯ ಪುತ್ರ ದೂರಿನಲ್ಲಿ ತಿಳಿಸಿದ್ದರು.

ಅಜ್ಞಾತ ಸ್ಥಳದಲ್ಲಿ ರೇವಣ್ಣ

ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ ರೇವಣ್ಣಗೂ ಬಂಧನ ಭೀತಿ ಎದುರಾಗಲಿದೆ. ಹೀಗಾಗಿ ಸದ್ಯ ಬೆಂಗಳೂರಿನ ಅಜ್ಞಾತ ಸ್ಥಳದಲ್ಲಿದ್ದು ರೇವಣ್ಣ ವಕೀಲರ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.

ಈ ಮಧ್ಯೆ, ಇಂದು ಸಂಜೆಯೊಳಗೆ ವಿಚಾರಣೆಗೆ ಹಾಜರಾಗಲು ರೇವಣ್ಣಗೆ ಎಸ್​​​ಐಟಿ ಎರಡನೇ ನೋಟಿಸ್ ನೀಡಿದೆ. ಇಂದು ನಿರೀಕ್ಷಣಾ ಜಾಮೀನು ಸಿಕ್ಕಿದರೆ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
ಇಂದು ನಿರೀಕ್ಷಣ ಜಾಮೀನು ಸಿಕ್ಕರೆ ವಿಚಾರಣೆಗೆ ಹಾಜರು ಸಾಧ್ಯತೆ


Spread the love

About Laxminews 24x7

Check Also

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ

Spread the love ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ