Home / Uncategorized / ಮೇ 7ರಂದು ಮತದಾನ: ಮದ್ಯ ಮಾರಾಟ ನಿರ್ಬಂಧ ಮಾಹಿತಿ

ಮೇ 7ರಂದು ಮತದಾನ: ಮದ್ಯ ಮಾರಾಟ ನಿರ್ಬಂಧ ಮಾಹಿತಿ

Spread the love

ಚಿಕ್ಕಮಗಳೂರು, ಮೇ 04: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತದಾನದ ಹಿನ್ನಲೆಯಲ್ಲಿ ಮದ್ಯ ಮಾರಾಟದ ಮೇಲೆ ನಿರ್ಬಂಧ ವಿಧಿಸಿ ಆದೇಶಿಸಲಾಗಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ಇವರು ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ದಿನಾಂಕ 5/5/2024ರ ಸಂಜೆ 5 ಗಂಟೆಯಿಂದ ದಿನಾಂಕ 7/5/2024ರ ಮಧ್ಯರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಿಗೆ ಹೊಂದಿಕೊಂಡಿರುವ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿನ ಅಂಶಗಳು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮದ್ಯ ಮಾರಾಟ ಹಾಗೂ ಮದ್ಯಪಾನವನ್ನು ನಿಷೇಧಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

ಲೋಕಸಭಾ ಚುನಾವಣೆ -2024ರ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಗೆ ಹೊಂದಿಕೊಂಡಂತೆ ಇರುವ ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಲ್ಲಿ ದಿನಾಂಕ 7/5/2024ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆಯು ಮುಕ್ತ ಶಾಂತಿಯುತವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಬೇಕೆಂಬ ಉದ್ದೇಶದಿಂದ ಮತದಾನ ಮುಕ್ತಾಯಗೊಳ್ಳುವ ಪೂರ್ವದ 48 ಗಂಟೆ ಅಂದರೆ ದಿನಾಂಕ 5/5/2024ರ ಸಂಜೆ 5 ಗಂಟೆಯಿಂದ ದಿನಾಂಕ 7/5/2024ರ ಮದ್ಯರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಗಡಿಭಾಗದಲ್ಲಿನ 5 ಕಿ. ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಶುಷ್ಕ ದಿವಸವೆಂದು ಘೋಷಿಸಲು ಕೋರಲಾಗಿದೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ಮತದಾನ ಪ್ರಕ್ರಿಯೆಯನ್ನು ನಡೆಸುವುದು ಅತೀ ಅವಶ್ಯವಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗದ 5 ಕಿ. ಮೀ. ವ್ಯಾಪ್ತಿಯಲ್ಲಿ ಬರುವ ಮದ್ಯದ ಸನ್ನದುಗಳನ್ನು ಮುಚ್ಚುವುದು ಸೂಕ್ತವೆಂದು ಮನಗಂಡು ಈ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ

Spread the love ರಬಕವಿ-ಬನಹಟ್ಟಿ: ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ. ಗ್ರಾಮೀಣ ಭಾಗದ ಜನರು ಕುಸ್ತಿಗೆ ಬಹಳಷ್ಟು ಮಹತ್ವ ನೀಡುತ್ತಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ