Breaking News

ದುಬೈನ ಅಪಾರ್ಟ್ ಮೆಂಟ್ ನಲ್ಲಿ ‘ಪ್ರಜ್ವಲ್ ರೇವಣ್ಣ’ ವಾಸ್ತವ್ಯ!

Spread the love

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ ದುಬೈನ ಅಪಾರ್ಟ್ ಮೆಂಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸದ್ಯ ದುಬೈನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಪಾರ್ಟ್ಮೆಂಟ್ ಒಂದರಲ್ಲಿ ವಾಸ್ತವ ಹೂಡಿದ್ದಾರೆ.ದುಬೈನಲ್ಲಿ ಕೇರಳ ಮೂಲದ ವ್ಯಕ್ತಿಯ ಅಪಾರ್ಟ್ಮೆಂಟ್ ನಲ್ಲಿ ಪ್ರಜ್ವಲ್ ರೇವಣ್ಣ ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿದುಬಂದಿದೆ.ರಾತ್ರಿ ಬೆಂಗಳೂರಿಗೆ ಬಂದು ನಾಳೆ ಎಸ್‌ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

ತಂದೆ ಬಂಧನ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರಲು ನಿರ್ಧರಿಸಿದ್ದಾರೆ ಬೆಂಗಳೂರಿಗೆ ಬರುವ ಬಗ್ಗೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಜೊತೆಗೆ ಚರ್ಚಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರನ್ನು sit ಅಧಿಕಾರಿಗಳು ನಿನ್ನೆ ಬಂಧಿಸಿದ್ದು ಇದರ ಬೆನ್ನಲ್ಲೇ ಅಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಶಲ ರೇವಣ್ಣ ಅವರು ನಾಳೆ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ತಂದೆ ಬಂಧನದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಈ ಒಂದು ನಿರ್ಧಾರಕ್ಕೆ ಬಂದಿದ್ದು, ನಾಳೆ ಮಧ್ಯಾಹ್ನದ ಒಳಗೆ ಎಸ್‌ಐಟಿ ಮುಂದೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧರಿಸಿದ್ದಾರೆ. ಎಸ್ ಐ ಟಿ ಮುಂದೆ ಹಾಜರಾಗಿ ವಿಚಾರಣೆಯನ್ನು ಎದುರಿಸಲು ಪ್ರಜ್ವಲ ರೇವಣ್ಣ ನಿರ್ಧರಿಸಿದ್ದಾರೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ