Breaking News

ಪ್ರಜ್ವಲ್‌ ಬಳಿಕ ಹೆಚ್‌ ಡಿ ರೇವಣ್ಣ ಅಮಾನತು ಫಿಕ್ಸ್? ರಾತ್ರೋರಾತ್ರಿ ಕುಮಾರಸ್ವಾಮಿ ಮಹತ್ವದ ಸಭೆ

Spread the love

ಬೆಂಗಳೂರು, ಮೇ 05: ಹಾಸನದಲ್ಲಿ ಭಾರೀ ಸದ್ದು ಮಾಡಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಸದ್ಯ ಜರ್ಮನಿಯಲ್ಲಿದ್ದು, ಎಸ್‌ ಐಟಿ ತನಿಖೆ ಶುರು ಮಾಡಿದೆ. ಈಗಾಗಲೇ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರನ್ನ ಬಂಧಿಸಿದ್ದು, ದಳಪತಿಗಳಿಗೆ ದೊಡ್ಡ ತಲೆನೋವಾಗಿದೆ.

ಹೌದು, ದಿನದಿಂದ ದಿನಕ್ಕೆ ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ತನ್ನ ಅಸ್ತಿತ್ವವನ್ನ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ದಳಪತಿಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಭರ್ಜರಿ ಚುನಾವಣಾ ಪ್ರಚಾರವನ್ನ ನಡೆಸುತ್ತಿದ್ದ ದಳಪತಿಗಳಿಗೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್ ಪ್ರಕರಣ ಮುಜುಗರವನ್ನುಂಟು ಮಾಡಿದೆ. ಈಗಾಗಲೇ ಪ್ರಜ್ವಲ್‌ ರೇವಣ್ಣ ಅವರಿಗೆ ಎಸ್‌ ಐಟಿ ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಿದ್ದು, ಇತ್ತ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅವರನ್ನ ಪಕ್ಷ ಅಮಾನತು ಮಾಡಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ಎಚ್ ಡಿ ರೇವಣ್ಣ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ಜೆಡಿಎಸ್ ಶಾಸಕರ ಎಚ್ ಡಿ ರೇವಣ್ಣ ಅವರನ್ನು ಶನಿವಾರ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಹಿರಿಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಲೋಕಸಭಾ ಚುನಾವಣಾ ಹೊತ್ತಲಿ ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳು ಜೆಡಿಎಸ್ ಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ಹೀಗಾಗಿ ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಈಗಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ಅಮಾನತು ಮಾಡಲಾಗಿತ್ತು. ಹೆಚ್‌ ಡಿ ರೇವಣ್ಣ ಶನಿವಾರ ಬಂಧನಕ್ಕೀಡಾಗಿದ್ದರಿಂದ ದಳಪತಿಗಳು ಮುಜುಗರವನ್ನ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಏಪ್ರಿಲ್ 29ರಂದು ರೇವಣ್ಣ ಅವರ ಸಂಬಂಧ ಸತೀಶ್ ಬಾಬು ಎಂಬುವರು ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು. ಈ ಸಂಬಂಧ ತನಿಖೆ ತೀವ್ರಗೊಳಿಸಿದ್ದ ಎಸ್‌ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ