Breaking News

ಚುನಾವಣಾ ಚೆಕ್‌ಪೋಸ್ಟ್‌ ಅಧಿಕಾರಿ ಹೃದಯಾಘಾತದಿಂದ ಸಾವು

Spread the love

ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಕುಡಂಬಲ್‌ ಚುನಾವಣಾ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್‌ (32) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.

‘ನಿರ್ಣಾ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿಯಾಗಿದ್ದ ಆನಂದ ಅವರು ಚುನಾವಣಾ ಕರ್ತವ್ಯಕ್ಕಾಗಿ ಕುಡಂಬಲ್‌ ಚೆಕ್‌ಪೋಸ್ಟ್‌ನಲ್ಲಿ ನಿಯೋಜನೆಗೊಂಡಿದ್ದರು.

 

ಬೆಳಿಗ್ಗೆ 8ರಿಂದ ಮಧ್ಯಾಹ್ನ 3ರ ಪಾಳಿ ಕರ್ತವ್ಯದಲ್ಲಿದ್ದರು. ಮಧ್ಯಾಹ್ನ ತೀವ್ರ ತೆರನಾದ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಮಧ್ಯಾಹ್ನ 1ಕ್ಕೆ ಕೊನೆಯುಸಿರೆಳೆದಿದ್ದಾರೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ